1. ಯೆಹೋವನು ನನಗೆ ಬಂಡೆಯಾಗಿದ್ದಾನೆ. ಆತನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಯುದ್ಧಕ್ಕೂ ಕದನಕ್ಕೂ ತರಬೇತು ಮಾಡುವನು.
|
2. ಆತನು ನನ್ನನ್ನು ಪ್ರೀತಿಸುವ ದೇವರೂ ನನ್ನ ಕೋಟೆಯೂ ನನ್ನ ದುರ್ಗವೂ ನನ್ನ ರಕ್ಷಕನೂ ನನ್ನ ಗುರಾಣಿಯೂ ನನ್ನ ಆಶ್ರಯವೂ ಆಗಿದ್ದಾನೆ.
|
3. ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ನೀನು ಅವನನ್ನು ಯಾಕೆ ನೆನಸಬೇಕು? ಮನುಷ್ಯನು ಎಷ್ಟರವನು? ನೀನು ಅವನನ್ನು ಯಾಕೆ ಗಮನಿಸಬೇಕು?
|
7. ಮೇಲಣ ಲೋಕದಿಂದ ಕೈಚಾಚಿ ಮಹಾ ಜಲರಾಶಿಯಂತಿರುವ ನನ್ನ ಶತ್ರುಗಳಿಂದ ನನ್ನನ್ನು ಎಳೆದುಕೋ. ಅನ್ಯಜನರ ಕೈಯಿಂದ ನನ್ನನ್ನು ಬಿಡಿಸು.
|
9. ಯೆಹೋವನೇ, ನಿನಗೆ ನೂತನ ಕೀರ್ತನೆಯನ್ನು ಹಾಡುವೆನು. ನಾನು ಹತ್ತುತಂತಿಗಳ ಹಾರ್ಪ್ವಾದ್ಯವನ್ನು ನುಡಿಸುತ್ತಾ ನಿನ್ನನ್ನು ಸ್ತುತಿಸುವೆನು.
|
10. ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.
|
13. ನಮ್ಮ ಕಣಜಗಳು ಸಕಲ ಬಗೆಯ ದವಸಧಾನ್ಯಗಳಿಂದ ತುಂಬಿರುತ್ತವೆ. ನಮ್ಮ ಹೊಲಗಳಲ್ಲಿರುವ ಕುರಿಗಳು ಸಾವಿರಾರು ಮರಿಗಳನ್ನು ಈಯುತ್ತವೆ.
|
14. ನಮ್ಮ ಸೈನಿಕರು ಸುರಕ್ಷಿತವಾಗಿದ್ದಾರೆ. ಯಾವ ಶತ್ರುಗಳೂ ನುಗ್ಗಿ ಬರಲು ಪ್ರಯತ್ನಿಸುತ್ತಿಲ್ಲ. ನಾವು ಯುದ್ಧಕ್ಕೆ ಹೋಗುವುದೂ ಇಲ್ಲ; ನಮ್ಮ ಬೀದಿಗಳಲ್ಲಿ ಗೋಳಾಟವೂ ಇರುವುದಿಲ್ಲ.
|