ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನಿಗೆ ಸ್ತೋತ್ರವಾಗಲಿ. [QBR] ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! [QBR2] ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ. [QBR]
2. ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! [QBR2] ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ. [QBR]
3. ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ [QBR2] ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ. [QBR]
4. ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. [QBR2] ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು! [QBR]
5. ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! [QBR2] ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ.
6. ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ [QBR2] ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ. [QBR]
7. ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; [QBR2] ಅನ್ಯ ಜನರನ್ನು ದಂಡಿಸಲಿ. [QBR]
8. ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು [QBR2] ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು. [QBR]
9. ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. [QBR2] ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 149 / 150
ಕೀರ್ತನೆಗಳು 149:40
1 ಯೆಹೋವನಿಗೆ ಸ್ತೋತ್ರವಾಗಲಿ. ಯೆಹೋವನ ಹೊಸ ಕಾರ್ಯಗಳಿಗಾಗಿ ಆತನಿಗೆ ಹೊಸ ಹಾಡನ್ನು ಹಾಡಿರಿ! ಆತನ ಭಕ್ತರ ಸಭೆಯಲ್ಲಿ ಆತನನ್ನು ಸಂಕೀರ್ತಿಸಿರಿ. 2 ಇಸ್ರೇಲರು ತಮ್ಮ ಸೃಷ್ಟಿಕರ್ತನಲ್ಲಿ ಉಲ್ಲಾಸಿಸಲಿ! ಚೀಯೋನಿನ ಜನರು ತಮ್ಮ ರಾಜನಲ್ಲಿ ಹರ್ಷಿಸಲಿ. 3 ಅವರು ನೃತ್ಯಮಾಡುತ್ತಾ ಝಲ್ಲರಿಗಳನ್ನು ಬಡಿಯುತ್ತಾ ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸ್ತುತಿಸಲಿ. 4 ಯೆಹೋವನು ತನ್ನ ಜನರಲ್ಲಿ ಸಂತೋಷಿಸುವನು. ಆತನು ತನ್ನ ದೀನಜನರಿಗಾಗಿ ಅದ್ಭುತಕಾರ್ಯವನ್ನು ಮಾಡಿ ಅವರನ್ನು ರಕ್ಷಿಸಿದನು! 5 ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ. 6 ಜನರು ಆತನಿಗೆ ಗಟ್ಟಿಯಾಗಿ ಸ್ತೋತ್ರಮಾಡುತ್ತಾ ತಮ್ಮ ಇಬ್ಭಾಯಿ ಕತ್ತಿಗಳನ್ನು ಕೈಗಳಲ್ಲಿ ತೆಗೆದುಕೊಳ್ಳಲಿ. 7 ಅವರು ಹೋಗಿ ತಮ್ಮ ಶತ್ರುಗಳನ್ನು ದಂಡಿಸಲಿ; ಅನ್ಯ ಜನರನ್ನು ದಂಡಿಸಲಿ. 8 ದೇವಜನರು ಆ ರಾಜರುಗಳನ್ನು ಮತ್ತು ಪ್ರಮುಖರನ್ನು ಸರಪಣಿಗಳಿಂದಲೂ ಕಬ್ಬಿಣದ ಬೇಡಿಗಳಿಂದಲೂ ಬಂಧಿಸುವರು. 9 ಆತನ ಆಜ್ಞೆಗನುಸಾರವಾಗಿ ಆತನ ಭಕ್ತರು ತಮ್ಮ ಶತ್ರಗಳನ್ನು ದಂಡಿಸುವರು. ಆತನು ತನ್ನ ಭಕ್ತರಿಗೆ ಒಳ್ಳೆಯವನಾಗಿದ್ದಾನೆ. ಯೆಹೋವನಿಗೆ ಸ್ತೋತ್ರವಾಗಲಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 149 / 150
Common Bible Languages
West Indian Languages
×

Alert

×

kannada Letters Keypad References