ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ. [QBR]
2. ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು. [QBR2] ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು. [QBR]
3. ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; [QBR2] ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.
4. ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. [QBR2] ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, [QBR2] ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ. [QBR]
5. ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. [QBR2] ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ. [QBR]
6. ನನ್ನ ಪಾಲು [*ಪಾಲು ಅಥವಾ “ಭೂಮಿಯ ಭಾಗ.”] ರಮಣೀಯವಾಗಿದೆ. [QBR2] ನನ್ನ ಸ್ವಾಸ್ತ್ಯವು [†ಸ್ವಾಸ್ತ್ಯ ಇದರ ಅರ್ಥ: ಪ್ರತಿಯೊಂದು ಯೆಹೂದ್ಯ ಕುಟುಂಬವು ದೇವರಿಂದ ಸ್ವೀಕರಿಸಿದ ಭೂಮಿ.] ಬಹು ಸುಂದರವಾಗಿದೆ. [QBR]
7. ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; [QBR2] ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
8. ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; [QBR2] ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ. [QBR]
9. ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. [QBR2] ನನ್ನ ದೇಹವೂ ಸುರಕ್ಷಿತವಾಗಿರುವುದು. [QBR]
10. ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. [QBR2] ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ. [QBR]
11. ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. [QBR2] ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; [QBR2] ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 150
ಕೀರ್ತನೆಗಳು 16:136
1 ದೇವರೇ, ನನ್ನನ್ನು ಕಾಪಾಡು. ಯಾಕೆಂದರೆ ನಾನು ನಿನ್ನನ್ನೇ ಆಶ್ರಯಿಸಿಕೊಂಡಿರುವೆ. 2 ನಾನು ಯೆಹೋವನಿಗೆ, “ನೀನೇ ನನ್ನ ಒಡೆಯನು. ನನ್ನಲ್ಲಿರುವ ಒಳ್ಳೆಯದನ್ನೆಲ್ಲ ದಯಪಾಲಿಸಿದಾತನು ನೀನೇ” ಎಂದು ಹೇಳಿದೆನು. 3 ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು. 4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ. 5 ನನ್ನ ಪಾಲೂ ನನ್ನ ಪಾತ್ರೆಯೂ ಯೆಹೋವನಿಂದಲೇ ಬರುತ್ತವೆ. ನನಗೆ ಆಧಾರವಾಗಿದ್ದು ನನ್ನ ಪಾಲನ್ನು ದಯಪಾಲಿಸುವಾತನು ನೀನೇ. 6 ನನ್ನ ಪಾಲು *ಪಾಲು ಅಥವಾ “ಭೂಮಿಯ ಭಾಗ.” ರಮಣೀಯವಾಗಿದೆ. ನನ್ನ ಸ್ವಾಸ್ತ್ಯವು ಸ್ವಾಸ್ತ್ಯ ಇದರ ಅರ್ಥ: ಪ್ರತಿಯೊಂದು ಯೆಹೂದ್ಯ ಕುಟುಂಬವು ದೇವರಿಂದ ಸ್ವೀಕರಿಸಿದ ಭೂಮಿ. ಬಹು ಸುಂದರವಾಗಿದೆ. 7 ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು. 8 ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ. 9 ಆದ್ದರಿಂದ ನನ್ನ ಹೃದಯವೂ ಆತ್ಮವೂ ಉಲ್ಲಾಸಪಡುತ್ತವೆ. ನನ್ನ ದೇಹವೂ ಸುರಕ್ಷಿತವಾಗಿರುವುದು. 10 ಯಾಕೆಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ. 11 ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 16 / 150
Common Bible Languages
West Indian Languages
×

Alert

×

kannada Letters Keypad References