3. ಯೆಹೋವನು ಭೂಲೋಕದಲ್ಲಿರುವ ತನ್ನ ಭಕ್ತರಿಗೆ ಅತಿಶಯವಾದವುಗಳನ್ನು ಮಾಡುವನು; ಅವರ ಮೇಲೆ ತನಗಿರುವ ನಿಜವಾದ ಪ್ರೀತಿಯನ್ನು ತೋರ್ಪಡಿಸುವನು.
|
4. ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.
|
7. ನನ್ನ ಆಲೋಚನಾಕರ್ತನಾದ ಯೆಹೋವನನ್ನು ಕೊಂಡಾಡುವೆನು; ರಾತ್ರಿಯಲ್ಲಿಯೂ, ಆತನು ತನ್ನ ಆಲೋಚನೆಗಳನ್ನು ನನ್ನ ಅಂತರಾತ್ಮದಲ್ಲಿ ಬೇರೂರಿಸುವನು.
|
8. ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.
|
10. ಯಾಕಂದರೆ, ನೀನು ನನ್ನ ಆತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ. ನಿನ್ನ ಪವಿತ್ರನನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.
|
11. ನೀನು ನನಗೆ ಜೀವಮಾರ್ಗವನ್ನು ಉಪದೇಶಿಸುವೆ. ನಿನ್ನ ಸನ್ನಿಧಿಯಲ್ಲಿದ್ದರೆ ಪರಿಪೂರ್ಣ ಸಂತೋಷವಿರುವುದು; ನಿನ್ನ ಬಲಗಡೆಯಲ್ಲಿದ್ದರೆ ಶಾಶ್ವತವಾದ ಆನಂದವಿರುವುದು.
|