1. ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. [QBR2] ನನ್ನ ಮೊರೆಯನ್ನು ಆಲೈಸು, ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು. [QBR]
2. ನನ್ನ ಕುರಿತಾಗಿ ನ್ಯಾಯವಾದ ತೀರ್ಪು ನಿನ್ನಿಂದಲೇ ಬರಲಿ. [QBR2] ನೀನು ಸತ್ಯವನ್ನು ನೋಡಬಲ್ಲಾತನಾಗಿರುವೆ. [QBR]
3. ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. [QBR2] ನೀನು ನನ್ನನ್ನು ಪ್ರಶ್ನಿಸಿದಾಗ [QBR] ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. [QBR2] ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ. [QBR]
4. ನಿನ್ನ ಆಜ್ಞೆಗಳಿಗೆ ವಿಧೇಯನಾಗಲು [QBR2] ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ. [QBR]
5. ನಿನ್ನ ಜೀವಮಾರ್ಗದಲ್ಲೇ ಹೆಜ್ಜೆಯಿಡುತ್ತಾ ನಡೆಯುತ್ತಿದ್ದೇನೆ. [QBR2] ನನ್ನ ಪಾದವು ತಪ್ಪು ದಾರಿಗೆ ಹೋಗಲಿಲ್ಲ. [QBR]
6. ದೇವರೇ, ನಾನು ನಿನ್ನನ್ನು ಕರೆದಾಗಲ್ಲೆಲ್ಲಾ, [QBR2] ನೀನು ನನಗೆ ಉತ್ತರಿಸಿದೆ. ಆದ್ದರಿಂದ ಈಗಲೂ ನನಗೆ ಕಿವಿಗೊಡು. [QBR]
7. ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ [QBR2] ನೀನು ಸಹಾಯಮಾಡುವೆ; [QBR] ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. [QBR2] ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು. [QBR]
8. ನಿನ್ನ ಕಣ್ಣಿನ ಗುಡ್ಡೆಯಂತೆ ನನ್ನನ್ನು ಸಂರಕ್ಷಿಸು. [QBR2] ನಿನ್ನ ರೆಕ್ಕೆಗಳ ಮರೆಯಲ್ಲಿ ನನ್ನನ್ನು ಅಡಗಿಸಿಕೊ. [QBR]
9. ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. [QBR2] ನನಗೆ ಕೇಡುಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು. [QBR]
10. ಆ ದುಷ್ಟರು ಗರ್ವಿಷ್ಠರಾಗಿದ್ದಾರೆ. [QBR2] ಅವರು ಜಂಬಕೊಚ್ಚಿಕೊಳ್ಳುತ್ತಾರೆ. [QBR]
11. ಅವರು ನನ್ನನ್ನು ಬೆನ್ನಟ್ಟಿ ಬಂದು ಸುತ್ತುಗಟ್ಟಿದ್ದಾರೆ; [QBR2] ಆಕ್ರಮಣಮಾಡಲು ಸಿದ್ಧರಾಗಿದ್ದಾರೆ. [*ಆಕ್ರಮಣಮಾಡಲು ಸಿದ್ಧರಾಗಿದ್ದಾರೆ ಅಕ್ಷರಶಃ, “ಅವರು ನೆಲದ ಮೇಲೆ ಬೀಳಿಸಲು ದೃಷ್ಟಿಯಿಟ್ಟಿದ್ದಾರೆ.”] [QBR]
12. ಅವರು ಬೇಟೆಗಾಗಿ ಕಾಯುತ್ತಿರುವ ಸಿಂಹಗಳಂತಿದ್ದಾರೆ; [QBR2] ಅಡಗಿಕೊಂಡು ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಂತಿದ್ದಾರೆ.
13. ಯೆಹೋವನೇ, ಎದ್ದೇಳು, [†ಯೆಹೋವನೇ, ಎದ್ದೇಳು ಒಡಂಬಡಿಕೆಯ ಪೆಟ್ಟಿಗೆಯನ್ನು ಎತ್ತಿದಾಗ ಮತ್ತು ತಮ್ಮೊಂದಿಗೆ ಅದನ್ನು ಯುದ್ಧದೊಳಗೆ ತೆಗೆದುಕೊಂಡು ಹೋದಾಗ ಜನರು ಇದನ್ನು ಹೇಳಿದರು. ದೇವರು ಅವರೊಂದಿಗೆ ಇದ್ದನು ಎಂಬುದನ್ನು ಇದು ತೋರಿಸುತ್ತದೆ. ಅರಣ್ಯಕಾಂಡ 10:35-36 ನೆಯ ವಚನಗಳನ್ನು ನೋಡಿರಿ.] ವೈರಿಗಳ ಬಳಿಗೆ ಹೋಗು. [QBR2] ಅವರನ್ನು ಶರಣಾಗತರನ್ನಾಗಿ ಮಾಡು. [QBR2] ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು. [QBR]
14. ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ [QBR2] ನನ್ನನ್ನು ತಪ್ಪಿಸಿ ಕಾಪಾಡು. [QBR] ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. [QBR2] ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. [QBR2] ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.
15. ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. [QBR2] ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು. [PE]