1. ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು. ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.
|
3. ನೀನು ನನ್ನ ಅಂತರಾಳವನ್ನು ರಾತ್ರಿಯೆಲ್ಲಾ ಪರೀಕ್ಷಿಸಿರುವೆ. ನೀನು ನನ್ನನ್ನು ಪ್ರಶ್ನಿಸಿದಾಗ ನನ್ನಲ್ಲಿ ಯಾವ ದೋಷವೂ ಕಂಡುಬರಲಿಲ್ಲ. ನಾನು ಯಾವ ತಪ್ಪನ್ನೂ ಮಾಡಿರಲಿಲ್ಲ.
|
7. ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.
|
9. ಯೆಹೋವನೇ, ನನ್ನನ್ನು ನಾಶಮಾಡಬೇಕೆಂದಿರುವ ದುಷ್ಟರಿಂದ ನನ್ನನ್ನು ತಪ್ಪಿಸಿ ಕಾಪಾಡು. ನನಗೆ ಕೇಡು ಮಾಡಬೇಕೆಂದು ಸುತ್ತುಗಟ್ಟಿರುವ ಜನರಿಂದ ನನ್ನನ್ನು ಸಂರಕ್ಷಿಸು.
|
13. ಯೆಹೋವನೇ, ಎದ್ದೇಳು; ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.
|
14. ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.
|
15. ನಾನು ನ್ಯಾಯಕ್ಕಾಗಿ ಪ್ರಾರ್ಥಿಸಿದ್ದರಿಂದ ನನಗೆ ನಿನ್ನ ಮುಖದ ದರ್ಶನವಾಗುವುದು. ಎಚ್ಚೆತ್ತಾಗ ನಿನ್ನ ಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
|