2. ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾ ಬಲವೂ ನನ್ನ ದುರ್ಗವೂ ಆಗಿದ್ದಾನೆ.
|
6. ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.
|
12. ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.
|
13. ಯೆಹೋವನು ಆಕಾಶದಲ್ಲಿ ಗುಡುಗಿದನು; ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು. ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.
|
15. ಯೆಹೋವನೇ, ನೀನು ಆಜ್ಞಾಪಿಸಿದಾಗ ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು ಸಮುದ್ರದ ತಳವೇ ಕಾಣಿಸಿತು. ಭೂಮಿಯ ಅಸ್ತಿವಾರಗಳೂ ಕಾಣಿಸಿದವು.
|
17. ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತಲೂ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು.
|
19. ಆತನು ನನ್ನನ್ನು ಪ್ರೀತಿಸುವುದರಿಂದ ನನ್ನನ್ನು ರಕ್ಷಿಸಿದನು; ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದುಕೊಂಡು ಬಂದನು.
|
20. ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು.
|
25. ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. ನಿನಗೆ ನಂಬಿಗಸ್ತರಾಗಿರುವವರಿಗೆ ನೀನೂ ನಂಬಿಗಸ್ತನಾಗಿರುವೆ.
|
28. ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.
|
29. ಯೆಹೋವನೇ, ನಿನ್ನ ಸಹಾಯದಿಂದ ನಾನು ಸೈನಿಕರೊಡನೆ ಓಡಬಲ್ಲೆ. ನನ್ನ ದೇವರ ಸಹಾಯದಿಂದ ನಾನು ಶತ್ರುಗಳ ಕೋಟೆಗಳನ್ನು ಹತ್ತುವೆನು.
|
30. ದೇವರ ಮಾರ್ಗಗಳು ನಿಷ್ಕಳಂಕವಾಗಿವೆ; ಯೆಹೋವನ ಮಾತುಗಳು ಸತ್ಯವಾಗಿವೆ. ಆತನು ತನ್ನಲ್ಲಿ ಭರವಸೆಯಿಟ್ಟಿರುವವರನ್ನು ಸಂರಕ್ಷಿಸುವನು.
|
33. ಆತನು ನನ್ನ ಪಾದಗಳನ್ನು ಜಿಂಕೆಯಂತೆ ವೇಗಗೊಳಿಸುವನು. ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು.
|
34. ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು. ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ.
|
35. ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ.
|
37. ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ. ಅವರನ್ನು ನಾಶಮಾಡುವ ತನಕ ನಾನು ಹಿಂತಿರುಗಿ ಬರುವುದಿಲ್ಲ.
|
39. ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ.
|
41. ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. ಅವರು ಯೋಹೋವನನ್ನೂ ಕೂಗಿಕೊಂಡರು; ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ.
|
42. ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು.
|
43. ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. ನನಗೆ ಗೊತ್ತಿಲ್ಲದವರೂ ನನ್ನ ಸೇಮಾಡುವರು.
|
46. ಯೋಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ.
|
48. ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ, ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ.
|
49. ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು.
|
50. ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನೂ ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.
|