1. ನನ್ನ ಬಲವಾಗಿರುವ ಯೆಹೋವನೇ, [QBR2] ನಿನ್ನನ್ನೇ ಪ್ರೀತಿಸುವೆನು!
2. ಯೆಹೋವನು ನನ್ನ ಬಂಡೆಯೂ [*ಬಂಡೆ ದೇವರ ಹೆಸರು. ಆತನು ಕೋಟೆಯಂತಿದ್ದಾನೆ ಅಥವಾ ಬಲವಾದ ಸುರಕ್ಷಿತ ಸ್ಥಳದಂತಿದ್ದಾನೆ ಎಂಬುದನ್ನು ಇದು ತೋರಿಸುತ್ತದೆ.] ನನ್ನ ಕೋಟೆಯೂ [QBR2] ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ [QBR2] ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.
3. ಯೆಹೋವನಿಗೆ ಸ್ತೋತ್ರವಾಗಲಿ! [QBR2] ನಾನು ಆತನಿಗೆ ಮೊರೆಯಿಟ್ಟಾಗ ನನ್ನನ್ನು ವೈರಿಗಳಿಂದ ರಕ್ಷಿಸಿದನು. [QBR]
4. ಮರಣಕರವಾದ ಹಗ್ಗಗಳು ನನ್ನನ್ನು ಬಿಗಿದುಕೊಂಡವು. [QBR2] ನಾಶಪ್ರವಾಹವು ನನ್ನನ್ನು ಪಾತಾಳಕ್ಕೆ ಕೊಚ್ಚಿಕೊಂಡು ಹೋಗುತ್ತಿತ್ತು. [QBR]
5. ಪಾತಾಳದ ಹಗ್ಗಗಳು ನನ್ನನ್ನು ಬಿಗಿದುಕೊಂಡಿದ್ದವು. [QBR2] ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು. [QBR]
6. ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; [QBR2] ನನ್ನ ದೇವರಿಗೆ ಮೊರೆಯಿಟ್ಟೆನು. [QBR] ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; [QBR2] ನನ್ನ ಮೊರೆಗೆ ಕಿವಿಗೊಟ್ಟನು. [QBR]
7. ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; [QBR2] ಪರ್ವತಗಳ ಬುನಾದಿಗಳು ಕಂಪಿಸಿದವು. [QBR]
8. ಆತನ ಮೂಗಿನಿಂದ ಹೊಗೆಯು ಬಂದಿತು; [QBR2] ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು. [QBR]
9. ಆತನು ಆಕಾಶವನ್ನು ಹರಿದು ಕೆಳಗಿಳಿದು ಬಂದನು. [QBR2] ಆತನು ದಟ್ಟವಾದ ಕಪ್ಪುಮೋಡದ ಮೇಲೆ ನಿಂತುಕೊಂಡನು. [QBR]
10. ಕೆರೂಬಿಗಳ ಮೇಲೆ ಆಸೀನನಾಗಿ [QBR2] ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು. [QBR]
11. ಆತನನ್ನು ಗುಡಾರದಂತೆ ಆವರಿಸಿಕೊಂಡಿದ್ದ ದಟ್ಟವಾದ ಕಪ್ಪುಮೋಡದಲ್ಲಿ [QBR2] ಆತನು ಮರೆಯಾದನು. [QBR]
12. ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು [QBR2] ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು. [QBR]
13. ಯೆಹೋವನು ಆಕಾಶದಲ್ಲಿ ಗುಡುಗಿದನು; [QBR2] ಮಹೋನ್ನತ ದೇವರು ತನ್ನ ಧ್ವನಿಯನ್ನು ಕೇಳುವಂತೆ ಮಾಡಿದನು. [QBR]
14. ಆತನು ಬಾಣಗಳನ್ನು [†ಬಾಣಗಳು ಅಂದರೆ “ಮಿಂಚು.”] ಎಸೆದು ವೈರಿಗಳನ್ನು ಚದರಿಸಿಬಿಟ್ಟನು; [QBR2] ಸಿಡಿಲುಮಿಂಚುಗಳಿಂದ ಅವರನ್ನು ಕಳವಳಗೊಳಿಸಿದನು.
15. ಯೆಹೋವನೇ, ನೀನು ಆಜ್ಞಾಪಿಸಿದಾಗ [QBR2] ಬಿರುಗಾಳಿಯು ಬೀಸತೊಡಗಿ ನೀರನ್ನು ನೂಕಲು [QBR] ಸಮುದ್ರದ ತಳವೇ ಕಾಣಿಸಿತು. [QBR2] ಭೂಮಿಯ ಅಸ್ತಿವಾರಗಳೂ ಕಾಣಿಸಿದವು.
16. ಆತನು ಮೇಲಿನ ಲೋಕದಿಂದ ಕೈಚಾಚಿ ನನ್ನನ್ನು ರಕ್ಷಿಸಿದನು. [QBR2] ಆತನು ನನ್ನ ಕೈಹಿಡಿದು ನೀರಿನಿಂದ ಮೇಲೆತ್ತಿದನು. [QBR]
17. ನನ್ನನ್ನು ದ್ವೇಷಿಸುವ ವೈರಿಗಳು [QBR2] ನನಗಿಂತ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು. [QBR]
18. ನಾನು ಕಷ್ಟದಲ್ಲಿದ್ದಾಗ ಅವರು ನನ್ನ ಮೇಲೆ ಆಕ್ರಮಣಮಾಡಲು, [QBR2] ಯೆಹೋವನು ನನಗೆ ಸಹಾಯಕನಾಗಿ ಬಂದನು. [QBR]
19. ಆತನು ನನ್ನನ್ನು ಪ್ರೀತಿಸುವುದರಿಂದ ನನ್ನನ್ನು ರಕ್ಷಿಸಿದನು; [QBR2] ನನ್ನನ್ನು ಸುರಕ್ಷಿತವಾದ ಸ್ಥಳಕ್ಕೆ ಕರೆದುಕೊಂಡು ಬಂದನು. [QBR]
20. ನಾನು ನಿರಪರಾಧಿಯಾಗಿದ್ದರಿಂದ ಯೆಹೋವನು ನನಗೆ ಪ್ರತಿಫಲ ನೀಡಿದನು; [QBR2] ನಾನು ತಪ್ಪನ್ನು ಮಾಡಿಲ್ಲದ ಕಾರಣ ನನಗೆ ಒಳ್ಳೆಯದನ್ನು ಮಾಡಿದನು. [QBR]
21. ಯಾಕೆಂದರೆ ನಾನು ಯೆಹೋವನಿಗೆ ವಿಧೇಯನಾಗಿದ್ದೆನು; [QBR2] ನನ್ನ ದೇವರ ವಿರೋಧನಾಗಿ ನಾನು ಪಾಪಮಾಡಲಿಲ್ಲ. [QBR]
22. ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ [QBR2] ಯಾವಾಗಲೂ ಜ್ಞಾಪಿಸಿಕೊಳ್ಳುವೆ. [QBR]
23. ಆತನ ಎದುರಿನಲ್ಲಿ ನಿರ್ದೋಷಿಯಾಗಿದ್ದೆನು. [QBR2] ಪಾಪದಲ್ಲಿ ಬೀಳದಂತೆ ಎಚ್ಚರಿಕೆಯಾಗಿದ್ದೆನು. [QBR]
24. ಯೆಹೋವನ ದೃಷ್ಟಿಯಲ್ಲಿ ನಾನು ನೀತಿವಂತನೂ ನಿರಪರಾಧಿಯೂ ಆಗಿರುವುದರಿಂದ [QBR2] ಆತನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.
25. ಯೆಹೋವನೇ, ನಿನ್ನನ್ನು ನಿಜವಾಗಿಯೂ ಪ್ರೀತಿಸುವವರನ್ನು [QBR2] ನೀನು ಶಾಶ್ವತವಾದ ಪ್ರೀತಿಯಿಂದ ಪ್ರೀತಿಸುವೆ. [QBR] ನಿನಗೆ ನಂಬಿಗಸ್ತರಾಗಿರುವವರಿಗೆ [QBR2] ನೀನೂ ನಂಬಿಗಸ್ತನಾಗಿರುವೆ. [QBR]
26. ನೀನು ಒಳ್ಳೆಯವರಿಗೂ ಶುದ್ಧರಿಗೂ ಒಳ್ಳೆಯವನಾಗಿಯೂ ಪರಿಶುದ್ಧನಾಗಿಯೂ ಇರುವೆ; [QBR2] ದುಷ್ಟರಿಗಾದರೋ ಶತ್ರುವಾಗಿರುವೆ. [QBR]
27. ಯೆಹೋವನೇ, ನೀನು ದೀನರಿಗೆ ಸಹಾಯಮಾಡುವೆ. [QBR2] ಗರ್ವಿಷ್ಠರಿಗಾದರೋ ಅವಮಾನ ಮಾಡುವೆ. [QBR]
28. ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. [QBR2] ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು. [QBR]
29. ಯೆಹೋವನೇ, ನಿನ್ನ ಸಹಾಯದಿಂದ ನಾನು ಸೈನಿಕರೊಡನೆ ಓಡಬಲ್ಲೆ. [QBR2] ನನ್ನ ದೇವರ ಸಹಾಯದಿಂದ ನಾನು ಶತ್ರುಗಳ ಕೋಟೆಗಳನ್ನು ಹತ್ತುವೆನು.
30. ದೇವರ ಮಾರ್ಗಗಳು ನಿಷ್ಕಳಂಕವಾಗಿವೆ; [QBR2] ಯೆಹೋವನ ಮಾತುಗಳು ಸತ್ಯವಾಗಿವೆ. [QBR2] ಆತನು ತನ್ನಲ್ಲಿ ಭರವಸೆಯಿಟ್ಟಿರುವವರನ್ನು ಸಂರಕ್ಷಿಸುವನು. [QBR]
31. ಯೆಹೋವನಲ್ಲದೆ ಬೇರೆ ಯಾವ ದೇವರೂ ಇಲ್ಲ. [QBR2] ನಮ್ಮ ದೇವರಲ್ಲದೆ ಬೇರೆ ಯಾವ ಬಂಡೆಯೂ ಇಲ್ಲ. [QBR]
32. ಆತನೇ, ನನಗೆ ಬಲವನ್ನು ಕೊಡುವನು; [QBR2] ಶುದ್ಧ ಜೀವನವನ್ನು ನಡೆಸಲು ನನಗೆ ಸಹಾಯಮಾಡುವನು. [QBR]
33. ಆತನು ನನ್ನ ಪಾದಗಳನ್ನು ಜಿಂಕೆಯಂತೆ [‡ಜಿಂಕೆ ಅಕ್ಷರಶಃ, “ಹೆಣ್ಣುಜಿಂಕೆ.”] ವೇಗಗೊಳಿಸುವನು. [QBR2] ಆತನು ನನ್ನನ್ನು ಸ್ಥಿರಗೊಳಿಸುವನು; ಎತ್ತರವಾದ ಸ್ಥಳಗಳಲ್ಲಿ ಬೀಳದಂತೆ ದೃಢಪಡಿಸುವನು. [QBR]
34. ಆತನು ನನ್ನನ್ನು ಯುದ್ಧಕ್ಕೆ ತರಬೇತಿಗೊಳಿಸುವನು. [QBR2] ಆದ್ದರಿಂದ ನನ್ನ ತೋಳುಗಳು ದೊಡ್ಡ ಬಿಲ್ಲಿನಿಂದ ಬಾಣವನ್ನು ಎಸೆಯಬಲ್ಲವು. ಆದ್ದರಿಂದ ನಾನು ಬಲವಾದ ಬಿಲ್ಲಿನ ತಂತಿಯನ್ನು ಎಸೆಯಬಲ್ಲೆ.
35. ದೇವರೇ, ನಿನ್ನ ವಿಜಯದ ಗುರಾಣಿಯನ್ನು ನೀನು ನನಗೆ ಕೊಟ್ಟಿರುವೆ. [QBR2] ನಿನ್ನ ಬಲಗೈ ನನಗೆ ಆಧಾರ ನೀಡುತ್ತದೆ. [QBR2] ನೀನು ನನ್ನನ್ನು ಪದೇಪದೇ ಬಲಗೊಳಿಸಿರುವೆ. [QBR]
36. ದೇವರೇ, ನಾನು ಮುಗ್ಗರಿಸದೆ ನಡೆಯಲು [QBR2] ನನ್ನ ಕಾಲುಗಳನ್ನೂ ಹರಡುಗಳನ್ನೂ ಬಲಗೊಳಿಸು.
37. ಆಗ ನಾನು ಶತ್ರುಗಳನ್ನು ಬೆನ್ನಟ್ಟಿ ಹಿಡಿಯಲು ಶಕ್ತನಾಗುವೆ. [QBR2] ಅವರನ್ನು ನಾಶಮಾಡುವ ತನಕ ನಾನು ಹಿಂತಿರುಗಿ ಬರುವುದಿಲ್ಲ. [QBR]
38. ನಾನು ನನ್ನ ಶತ್ರುಗಳನ್ನು ಸೋಲಿಸಿ ಅವರನ್ನು ಏಳಲಾರದಂತೆ ಮಾಡುವೆನು; [QBR2] ನನ್ನ ಶತ್ರುಗಳು ನನ್ನ ಪಾದಗಳ ಕೆಳಗೇ ಇರುವರು. [QBR]
39. ದೇವರೇ, ಯುದ್ಧದಲ್ಲಿ ನೀನು ನನ್ನನ್ನು ಬಲಿಷ್ಠನನ್ನಾಗಿ ಮಾಡಿದೆ; [QBR2] ಎಲ್ಲಾ ಶತ್ರುಗಳು ನನ್ನ ಎದುರಿನಲ್ಲಿ ಬೀಳುವಂತೆ ಮಾಡಿದೆ. [QBR]
40. ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು [QBR2] ನೀನು ನನಗೆ ಅವಕಾಶನೀಡಿದೆ. [QBR]
41. ನನ್ನ ಶತ್ರುಗಳು ಸಹಾಯಕ್ಕಾಗಿ ಕೂಗಿಕೊಂಡರು. [QBR2] ಆದರೆ ಅವರನ್ನು ರಕ್ಷಿಸಲು ಯಾರೂ ಇರಲಿಲ್ಲ. [QBR] ಅವರು ಯೆಹೋವನನ್ನೂ ಕೂಗಿಕೊಂಡರು; [QBR2] ಆದರೆ ಆತನೂ ಅವರಿಗೆ ಉತ್ತರಿಸಲಿಲ್ಲ. [QBR]
42. ನಾನು ನನ್ನ ಶತ್ರುಗಳನ್ನು ಹೊಡೆದು ತುಂಡುತುಂಡು ಮಾಡುವೆನು; ಜಜ್ಜಿ ಪುಡಿಪುಡಿ ಮಾಡುವೆನು; [QBR2] ಗಾಳಿ ಬಡಿದುಕೊಂಡು ಹೋಗುವ ಧೂಳಿನಂತೆ ಅವರಾಗುವರು.
43. ನನ್ನ ವಿರೋಧಿಗಳಿಂದ ನನ್ನನ್ನು ರಕ್ಷಿಸು. [QBR2] ಆ ಜನಾಂಗಗಳಿಗೆ ನನ್ನನ್ನು ನಾಯಕನನ್ನಾಗಿ ಮಾಡು. [QBR2] ನನಗೆ ಗೊತ್ತಿಲ್ಲದವರೂ ನನ್ನ ಸೇವೆಮಾಡುವರು. [QBR]
44. ಅವರು ನನ್ನ ಕುರಿತಾಗಿ ಕೇಳಿದ ಕೂಡಲೇ ವಿಧೇಯರಾಗುವರು. [QBR2] ಆ ವಿದೇಶಿಯರು ನನ್ನ ವಿಷಯದಲ್ಲಿ ಭಯದಿಂದಿರುವರು. [QBR]
45. ಆ ವಿದೇಶಿಯರು ಧೈರ್ಯವಿಲ್ಲದವರಾಗಿ ನಡುಗುತ್ತಾ [QBR2] ತಮ್ಮ ಕೋಟೆಗಳಿಂದ ಬರುವರು.
46. ಯೆಹೋವನು ಜೀವಸ್ವರೂಪನಾಗಿದ್ದಾನೆ. [QBR2] ನನ್ನ ಬಂಡೆಯಾಗಿರುವ ಆತನನ್ನು ಸ್ತುತಿಸುವೆನು. [QBR2] ನನ್ನನ್ನು ರಕ್ಷಿಸುವ ದೇವರು ಮಹೋನ್ನತನಾಗಿದ್ದಾನೆ. [QBR]
47. ದೇವರು ನನ್ನ ವೈರಿಗಳನ್ನು ದಂಡಿಸಿ [QBR2] ಅವರನ್ನು ನನಗೆ ಅಧೀನಪಡಿಸಿದ್ದಾನೆ. [QBR2]
48. ಯೆಹೋವನೇ, ಶತ್ರುಗಳಿಂದ ನೀನು ನನ್ನನ್ನು ಕಾಪಾಡಿದೆ. ನನ್ನ ವಿರೋಧಿಗಳನ್ನು ಸೋಲಿಸಲು ನೀನು ನನಗೆ ಸಹಾಯಮಾಡಿದೆ; [QBR2] ಕ್ರೂರಿಗಳಿಂದ ನನ್ನನ್ನು ರಕ್ಷಿಸಿದೆ. [QBR]
49. ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; [QBR2] ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು.
50. ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; [QBR2] ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. [QBR2] ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು. [PE]