2. ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು. ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.
|
4. ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ.
|
5. ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು. ಕ್ರೀಡಾಪಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.
|
6. ಸೂರ್ಯನು ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕೊನೆಗೆ ಓಡುತ್ತಾಹೋಗುವನು. ಅವನ ತಾಪಕ್ಕೆ ಯಾವುದೂ ಮರೆಯಾಗಿರಲಾರದು.
|
7. ಯೆಹೋವನ ಉಪದೇಶಗಳು ನಿಷ್ಕಳಂಕವಾಗಿವೆ. ಅವು ದೇವಜನರಿಗೆ ಬಲವನ್ನು ಕೊಡುತ್ತವೆ. ಯೆಹೋವನ ಕಟ್ಟಳೆಯು ಭರವಸೆಗೆ ಯೋಗ್ಯವಾಗಿದೆ. ಅದು ಮೂಢರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
|
8. ಯೆಹೋವನ ನಿಯಮಗಳು ನೀತಿಯ ಕಟ್ಟಳೆಗಳಾಗಿವೆ. ಅವು ಮನುಸ್ಸನ್ನು ಸಂತೋಷಗೂಳಿಸುತ್ತವೆ. ಯೆಹೋವನ ಆಜ್ಞೆಗಳು ಒಳ್ಳೆಯ ಆಜ್ಞೆಗಳಾಗಿವೆ. ಅವು ಕಣ್ಣುಗಳಿಗೆ ಬೆಳಕನ್ನು ನೀಡುತ್ತವೆ.
|
9. ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.
|
12. ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.
|
13. ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.
|
14. ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀವೇ ನನ್ನ ಬಂಡೆಯಾಗಿರುವೆ. ನನ್ನನ್ನು ರಕ್ಷಿಸುವಾತನು ನೀನೇ.
|