ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ.
2. ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. ಚೀಯೋನಿನಿಂದ ನಿನಗೆ ಆಧಾರ ನೀಡಲಿ.
3. ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.
4. ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ.
5. ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. ಆತನ ಹೆಸರನ್ನು ಕೊಂಡಾಡೋಣ. ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.
6. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು.
7. ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಿಸವಿಡುವರು. ನಾವಾದರೊ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು.
8. ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!
9. ಯಾಕಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು.

Notes

No Verse Added

Total 150 Chapters, Current Chapter 20 of Total Chapters 150
ಕೀರ್ತನೆಗಳು 20:48

×

Alert

×

kannada Letters Keypad References