ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. [QBR2] ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ. [QBR]
2. ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. [QBR2] ಚೀಯೋನಿನಿಂದ ನಿನಗೆ ಆಧಾರ ನೀಡಲಿ. [QBR]
3. ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. [QBR2] ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ. [QBR]
4. ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. [QBR2] ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ. [QBR]
5. ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. [QBR2] ಆತನ ಹೆಸರನ್ನು ಕೊಂಡಾಡೋಣ. [QBR2] ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.
6. ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. [QBR2] ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; [QBR2] ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು. [QBR]
7. ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. [QBR2] ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. [QBR2] ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು. [QBR]
8. ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; [QBR2] ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!
9. ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! [QBR2] ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 150
ಕೀರ್ತನೆಗಳು 20:87
1 ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಮೊರೆಯನ್ನು ಕೇಳಲಿ. ಯಾಕೋಬನ ದೇವರು ನಿನ್ನ ಹೆಸರನ್ನು ಪ್ರಖ್ಯಾತಿಪಡಿಸಲಿ. 2 ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. ಚೀಯೋನಿನಿಂದ ನಿನಗೆ ಆಧಾರ ನೀಡಲಿ. 3 ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ. 4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ. 5 ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. ಆತನ ಹೆಸರನ್ನು ಕೊಂಡಾಡೋಣ. ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ. 6 ಯೆಹೋವನು ತಾನು ಅಭಿಷೇಕಿಸಿದ ರಾಜನಿಗೆ ಸಹಾಯಮಾಡುತ್ತಾನೆಂದು ಈಗ ನನಗೆ ಗೊತ್ತಾಯಿತು. ದೇವರು ತಾನು ಆರಿಸಿಕೊಂಡ ರಾಜನಿಗೆ ಪರಲೋಕದಿಂದ ಉತ್ತರಿಸಿದನು; ತನ್ನ ಮಹಾಶಕ್ತಿಯಿಂದ ಅವನನ್ನು ರಕ್ಷಿಸಿದನು. 7 ಕೆಲವರು ತಮ್ಮ ರಥಗಳಲ್ಲಿ ಭರವಸವಿಡುವರು. ಕೆಲವರು ತಮ್ಮ ಸೈನಿಕರುಗಳಲ್ಲಿ ಭರವಸವಿಡುವರು. ನಾವಾದರೋ ನಮ್ಮ ದೇವರಾದ ಯೆಹೋವನನ್ನೇ ಜ್ಞಾಪಿಸಿಕೊಳ್ಳುವೆವು. 8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೊ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು! 9 ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 20 / 150
Common Bible Languages
West Indian Languages
×

Alert

×

kannada Letters Keypad References