4. ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವತವನ್ನು ಅನುಗ್ರಹಿಸಿದೆ.
|
8. ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.
|
9. ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.
|
11. ಯಾಕಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.
|
13. ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.
|