1. ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?
|
2. ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.
|
4. ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು. ನೀನು ಅವರನ್ನು ರಕ್ಷಿಸಿದೆ.
|
5. ನಮ್ಮ ಪೂರ್ವಿಕರು ನಿನ್ನಲ್ಲಿ ಮೊರೆಯಿಟ್ಟಾಗ ಅವರನ್ನು ಶತ್ರುಗಳಿಂದ ಬಿಡಿಸಿದೆ. ನಿನ್ನಲ್ಲಿ ಭರವಸವಿಟ್ಟಿದ್ದ ಅವರಿಗೆ ನಿರಾಶೆಯಾಗಲಿಲ್ಲ.
|
6. ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ. ಅವರು ನನ್ನನ್ನು ತಿರಸ್ಕರಿಸುತ್ತಾರೆ.
|
8. “ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎನ್ನುತ್ತಾರೆ.
|
9. ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ.
|
10. ಹುಟ್ಟಿದ ದಿನದಿಂದಲೂ ನೀನೇ ನನ್ನ ದೇವರಾಗಿರುವೆ. ತಾಯಿಯ ಗರ್ಭದಿಂದ ಬಂದಂದಿನಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ.
|
15. ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.
|
17. ನನ್ನ ಮೂಳೆಗಳು ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ!
|
23. ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ. ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ.
|
24. ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.
|
25. ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಯಜ್ಞಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.
|
26. ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯಗಳು ಯಾವಾಗಲೂ ಸಂತೋಷವಾಗಿರಲಿ!
|
27. ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.
|