ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. ಲೋಕವೂ ಅದರ ನಿವಾಸಿಗಳೂ ಅತನವೇ.
2. ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಅತನೇ.
3. ಯೆಹೋವನ ಪರ್ವತವನ್ನು ಹತ್ತುವವನು ಎಂಥವನಾಗಿರಬೇಕು? ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವಂಥವರು ಎಂಥವರಾಗಿರಬೇಕು?
4. ಅವರು ದುಷ್ಟಕಾರ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.
5. ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು.
6. ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರಬಳಿಗೆ ಹೋಗುವವರು ಇಂಥವರೇ.
7. ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.
8. ಮಹಿಮಾಸ್ವರೂಪನಾದ ಈ ರಾಜನು ಯಾರು? ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ ಯೆಹೋವನೇ ಆತನು.
9. ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರೆದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.
10. ಮಹಿಮಾಸ್ವರೂಪನಾದ ಈ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ಆ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.

Notes

No Verse Added

Total 150 Chapters, Current Chapter 24 of Total Chapters 150
ಕೀರ್ತನೆಗಳು 24:132
1. ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನವೇ. ಲೋಕವೂ ಅದರ ನಿವಾಸಿಗಳೂ ಅತನವೇ.
2. ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು ಆತನೇ. ಅದನ್ನು ಜಲರಾಶಿಗಳ ಮೇಲೆ ಕಟ್ಟಿದವನೂ ಅತನೇ.
3. ಯೆಹೋವನ ಪರ್ವತವನ್ನು ಹತ್ತುವವನು ಎಂಥವನಾಗಿರಬೇಕು? ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವಂಥವರು ಎಂಥವರಾಗಿರಬೇಕು?
4. ಅವರು ದುಷ್ಟಕಾರ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.
5. ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು.
6. ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರಬಳಿಗೆ ಹೋಗುವವರು ಇಂಥವರೇ.
7. ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.
8. ಮಹಿಮಾಸ್ವರೂಪನಾದ ರಾಜನು ಯಾರು? ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ ಯೆಹೋವನೇ ಆತನು.
9. ಹೆಬ್ಬಾಗಿಲುಗಳೇ, ಉನ್ನತವಾಗಿರಿ! ಪುರಾತನ ದ್ವಾರಗಳೇ, ತೆರೆದುಕೊಂಡಿರಿ. ಮಹಿಮಾಸ್ವರೂಪನಾದ ರಾಜನು ಆಗಮಿಸುತ್ತಿದ್ದಾನೆ.
10. ಮಹಿಮಾಸ್ವರೂಪನಾದ ರಾಜನು ಯಾರು? ಸೇನಾಧೀಶ್ವರನಾದ ಯೆಹೋವನೇ ರಾಜನು. ಮಹಿಮಾಸ್ವರೂಪನಾದ ರಾಜನು ಆತನೇ.
Total 150 Chapters, Current Chapter 24 of Total Chapters 150
×

Alert

×

kannada Letters Keypad References