2. ನನ್ನ ದೇವರೇ, ನಿನ್ನಲ್ಲಿ ಭರವಿಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!
|
5. ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. ನೀನೇ ನನ್ನ ದೇವರು. ನೀನೇ ನನ್ನ ರಕ್ಷಕ. ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ.
|
7. ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.
|
11. ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟಿ.
|
15. ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು.
|
20. ದೇವರೇ, ನನ್ನನ್ನು ಕಾಪಾಡು, ನನ್ನನ್ನು ರಕ್ಷಿಸು. ನಾನು ನಿನ್ನಲ್ಲಿ ಭರವಸವಿಟ್ಟಿರುವುದರಿಂದ ನನ್ನನನು ನಿರಾಶೆಗೊಳಿಸಬೇಡ.
|