1. ಯೆಹೋವನೇ, ನಿನ್ನಲ್ಲೇ ಮನಸ್ಸಿಟ್ಟಿದ್ದೇನೆ. [QBR]
2. ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. [QBR2] ನನ್ನನ್ನು ನಿರಾಶೆಗೊಳಿಸಬೇಡ. [QBR2] ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ! [QBR]
3. ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ [QBR2] ದ್ರೋಹಿಗಳಾದರೋ ನಿರಾಶರಾಗುವರು. [QBR2] ಅವರಿಗೆ ಏನೂ ದೊರೆಯುವುದಿಲ್ಲ.
4. ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ತಿಳಿಸು. [QBR2] ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು. [QBR]
5. ನನಗೆ ಮಾರ್ಗದರ್ಶನ ನೀಡು; ನಿನ್ನ ಸತ್ಯಗಳನ್ನು ನನಗೆ ಉಪದೇಶಿಸು. [QBR2] ನೀನೇ ನನ್ನ ದೇವರು, ನೀನೇ ನನ್ನ ರಕ್ಷಕ. [QBR2] ಹಗಲೆಲ್ಲಾ ನಿನ್ನಲ್ಲಿ ಭರವಸವಿಟ್ಟಿರುವೆ. [QBR]
6. ಯೆಹೋವನೇ, ನನಗೆ ಕರುಣೆ ತೋರಬೇಕೆಂಬುದನ್ನು ಜ್ಞಾಪಿಸಿಕೊ. [QBR2] ನಿನ್ನ ಶಾಶ್ವತವಾದ ಪ್ರೀತಿಯನ್ನು ನನಗೆ ತೋರಿಸು. [QBR]
7. ನಾನು ಯೌವನಸ್ಥನಾಗಿದ್ದಾಗ ಮಾಡಿದ ಪಾಪಗಳನ್ನಾಗಲಿ ಕೆಟ್ಟಕಾರ್ಯಗಳನ್ನಾಗಲಿ ಜ್ಞಾಪಿಸಿಕೊಳ್ಳಬೇಡ. [QBR2] ಯೆಹೋವನೇ, ನಿನ್ನ ಒಳ್ಳೆಯ ಹೆಸರಿನ ನಿಮಿತ್ತ ನನ್ನನ್ನು ಪ್ರೀತಿಯಿಂದ ಜ್ಞಾಪಿಸಿಕೊ.
8. ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. [QBR2] ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು. [QBR]
9. ಆತನು ದೀನರಿಗೆ ತನ್ನ ಮಾರ್ಗಗಳನ್ನು ಉಪದೇಶಿಸುವನು. [QBR2] ಆತನು ಅವರನ್ನು ತನ್ನ ನ್ಯಾಯಾನುಸಾರವಾಗಿ ನಡೆಸುವನು. [QBR]
10. ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ [QBR2] ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ.
11. ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. [QBR2] ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟೆ.
12. ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರಿಗೆ [QBR2] ಅತ್ಯುತ್ತಮವಾದ ಜೀವಮಾರ್ಗವನ್ನು ತೋರಿಸುವನು. [QBR]
13. ಅವನು ಸುಖದಿಂದಿರುವನು. [QBR2] ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು. [QBR]
14. ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. [QBR2] ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು. [QBR]
15. ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. [QBR2] ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು. [*ಆತನು … ಬಿಡಿಸುವನು ಅಕ್ಷರಶಃ, “ಆತನು ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವನು.”]
16. ಯೆಹೋವನೇ, ನಾನು ಬಾಧೆಪಡುವವನೂ ಒಬ್ಬಂಟಿಗನೂ ಆಗಿದ್ದೇನೆ. [QBR2] ನನಗೆ ಅಭಿಮುಖನಾಗಿ ಕರುಣೆತೋರು. [QBR]
17. ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. [QBR2] ನನ್ನ ಸಮಸ್ಯೆಗಳನ್ನು ಪರಿಹರಿಸು. [QBR]
18. ಯೆಹೋವನೇ, ನನ್ನ ಸಂಕಟವನ್ನೂ ತೊಂದರೆಗಳನ್ನೂ ನೋಡು. [QBR2] ನನ್ನ ಪಾಪಗಳನ್ನೆಲ್ಲ ಕ್ಷಮಿಸು. [QBR]
19. ನನ್ನ ವೈರಿಗಳನ್ನೆಲ್ಲ ದೃಷ್ಟಿಸಿನೋಡು. [QBR2] ಅವರು ನನ್ನನ್ನು ದ್ವೇಷಿಸುತ್ತಾ ಕೇಡುಮಾಡಬೇಕೆಂದಿದ್ದಾರೆ. [QBR]
20. ದೇವರೇ, ನನ್ನನ್ನು ಕಾಪಾಡು, ನನ್ನನ್ನು ರಕ್ಷಿಸು. [QBR2] ನಾನು ನಿನ್ನಲ್ಲಿ ಭರವಸವಿಟ್ಟಿರುವುದರಿಂದ ನನ್ನನ್ನು ನಿರಾಶೆಗೊಳಿಸಬೇಡ. [QBR]
21. ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. [QBR2] ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು. [QBR]
22. ದೇವರೇ, ಇಸ್ರೇಲರನ್ನು [QBR2] ವೈರಿಗಳಿಂದ ತಪ್ಪಿಸಿ ಕಾಪಾಡು. [PE]