1. ಯೆಹೋವನೇ, ನೀನೇ ನನಗೆ ಬೆಳಕೊ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೋಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!
|
3. ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.
|
4. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೋಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿದ್ದೇನೆ.
|
5. ನಾನು ಅಪಾಯದಲ್ಲಿರುವಾಗ ಯೆಹೋವನು ನನ್ನನ್ನು ಸಂರಕ್ಷಿಸುತ್ತಾನೆ; ತನ್ನ ಗುಡಾರದಲ್ಲಿ ನನ್ನನ್ನು ಅಡಗಿಸುತ್ತಾನೆ. ಸುರಕ್ಷಿತವಾದ ಸ್ಥಳಕ್ಕೆ ನನ್ನನ್ನು ಕೊಂಡೊಯ್ಯುವನು.
|
6. ವೈರಿಗಳು ನನಗೆ ಮುತ್ತಿಗೆ ಹಾಕಿದ್ದರೂ ಅವರನ್ನು ಸೋಲಿಸಲು ಯೆಹೋವನು ನನಗೆ ಸಹಾಯಮಾಡುವನು! ಆಗ ನಾನು ಆತನ ಗುಡಾರದಲ್ಲಿ ಉತ್ಸಾಹ ಧ್ವನಿಯೊಡನೆ ಯಜ್ಞಗಳನ್ನು ಅರ್ಪಿಸುವೆನು. ವಾದ್ಯಗಳನ್ನು ನುಡಿಸುತ್ತಾ ಆತನನ್ನು ಕೊಂಡಾಡುವೆನು.
|
8. ಯೆಹೋವನೇ, ನಾನು ನಿನ್ನೊಂದಿಗೆ ಹೃದಯ ಪೂರ್ವಕವಾಗಿ ಮಾತನಾಡಬೇಕೆಂದಿದ್ದೇನೆ. ದೇವರೇ, ನಾನು ನಿನ್ನ ಸನ್ನಿಧಿಗೆ ಬರುತ್ತೇನೆ.
|
9. ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದು ಬಿಡಬೇಡ!
|
11. ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.
|
12. ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.
|