1. ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.
|
2. ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.
|
3. ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ. ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತರೆ.
|
4. ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.
|
5. ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶ ಮಾಡುವನು.
|
7. ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
|
9. ಯೆಹೋವನೇ, ನಿನ್ನ ಜನರನ್ನು ರಕ್ಷಿಸು, ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು! ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.
|