ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. [QBR2] ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ. [QBR]
2. ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.
3. ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. [QBR2] ನೀನೇ ನನ್ನ ಗೌರವಕ್ಕೆ ಆಧಾರ. [QBR2] ನನ್ನನ್ನು ಜಯವೀರನನ್ನಾಗಿ ಮಾಡು.
4. ನಾನು ಯೆಹೋವನಿಗೆ ಪ್ರಾರ್ಥಿಸಲು, [QBR2] ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.
5. ಯೆಹೋವನು ನನ್ನನ್ನು ಕಾಪಾಡುವುದರಿಂದ [QBR2] ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು. [QBR]
6. ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ [QBR2] ನನಗೆ ಭಯವಿಲ್ಲ.
7. ಯೆಹೋವನೇ, ಎದ್ದೇಳು! [QBR2] ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! [QBR] ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ [QBR2] ಅವರ ಹಲ್ಲುಗಳು ಉದುರಿಹೋಗುತ್ತವೆ.
8. ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. [QBR2] ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 150
ಕೀರ್ತನೆಗಳು 3:126
1 ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ. 2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ. 3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು. 4 ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು. 5 ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು. 6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ. 7 ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ. 8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 3 / 150
Common Bible Languages
West Indian Languages
×

Alert

×

kannada Letters Keypad References