1. ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. [QBR2] ನನ್ನನ್ನು ನಿರಾಶೆಗೊಳಿಸಬೇಡ. [QBR2] ಕರುಣೆತೋರಿ ನನ್ನನ್ನು ರಕ್ಷಿಸು. [QBR2]
2. ನನಗೆ ಕಿವಿಗೊಡು. [QBR2] ಬೇಗನೆ ಬಂದು, ನನ್ನನ್ನು ರಕ್ಷಿಸು. [QBR] ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು [QBR2] ನನ್ನನ್ನು ಕಾಪಾಡು! [QBR]
3. ನೀನೇ ನನ್ನ ಬಂಡೆಯೂ ಕೋಟೆಯೂ ಆಗಿರುವುದರಿಂದ [QBR2] ನಿನ್ನ ಹೆಸರಿನ ಘನತೆಗಾಗಿ ನನ್ನನ್ನು ನಡೆಸು; ನನಗೆ ಮಾರ್ಗದರ್ಶನ ನೀಡು. [QBR]
4. ನನ್ನ ವೈರಿಗಳು ನನಗೆ ಬಲೆಬೀಸಿದ್ದಾರೆ. ಅವನ ಬಲೆಗೆ ಸಿಕ್ಕಿಬೀಳದಂತೆ ನನ್ನನ್ನು ರಕ್ಷಿಸು. [QBR2] ನೀನೇ ನನ್ನ ಆಶ್ರಯಸ್ಥಾನವಾಗಿರುವೆ. [QBR]
5. ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. [QBR2] ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. [QBR2] ನನ್ನನ್ನು ರಕ್ಷಿಸು! [QBR]
6. ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. [QBR2] ನಾನು ಯೆಹೋವನಲ್ಲಿಯೇ ಭರವಸವಿಡುವೆನು. [QBR]
7. ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. [QBR2] ನನ್ನ ಸಂಕಟವನ್ನು ನೀನು ನೋಡಿರುವೆ; [QBR2] ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ. [QBR]
8. ವೈರಿಗಳು ನನ್ನನ್ನು ಸೆರೆಹಿಡಿದೊಯ್ಯಲು ನೀನು ಬಿಟ್ಟುಕೊಡುವುದಿಲ್ಲ; [QBR2] ನನ್ನನ್ನು ಅವರ ಬಲೆಗಳಿಂದ ಬಿಡುಗಡೆ ಮಾಡುವೆ. [QBR]
9. ಯೆಹೋವನೇ, ನನಗೆ ಅನೇಕ ಇಕ್ಕಟ್ಟುಗಳಿವೆ; [QBR2] ನನ್ನನ್ನು ಕರುಣಿಸು. ಅತ್ತುಅತ್ತು ನನ್ನ ಕಣ್ಣುಗಳು ನೋಯುತ್ತಿವೆ, [QBR2] ನನ್ನ ಗಂಟಲು ನೋಯುತ್ತಿದೆ, ಹೊಟ್ಟೆಯೂ ನೋಯುತ್ತಿದೆ. [QBR]
10. ನನ್ನ ಜೀವಿತವು [*ಜೀವಿತ ಅಕ್ಷರಶಃ, “ಪ್ರಾಣ. “] ದುಃಖದಲ್ಲಿ ಕೊನೆಗೊಳ್ಳುತ್ತಿದೆ. [QBR2] ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. [QBR] ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. [QBR2] ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ. [†ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ ಅಕ್ಷರಶಃ, “ನನ್ನ ಎಲುಬುಗಳು ಸವೆದುಹೋಗುತ್ತಿವೆ.”] [QBR]
11. ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; [QBR2] ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; [QBR] ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; [QBR2] ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು. [QBR]
12. ನಾನು ಸತ್ತವರಂತೆ ಯಾರ ಜ್ಞಾಪಕಕ್ಕೂ ಬಾರದವನಾದೆನು. [QBR2] ಕಳೆದುಹೋದ ಉಪಕರಣದಂತೆ ಅವರು ನನ್ನನ್ನು ಮರೆತೇಬಿಟ್ಟಿದ್ದಾರೆ. [QBR]
13. ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. [QBR2] ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.
14. ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. [QBR2] ನೀನೇ ನನ್ನ ದೇವರು. [QBR]
15. ನನ್ನ ಜೀವವು ನಿನ್ನ ಕೈಗಳಲ್ಲಿದೆ. [QBR2] ವೈರಿಗಳಿಂದ ನನ್ನನ್ನು ರಕ್ಷಿಸು; ನನ್ನನ್ನು ಅಟ್ಟಿಸಿಕೊಂಡು [‡ಅಟ್ಟಿಸಿಕೊಂಡು ಅಥವಾ “ನನ್ನನ್ನು ಹಿಂಸಿಸುತ್ತಿರುವ,” “ನನ್ನನ್ನು ನೋಯಿಸುತ್ತಿರುವ.”] ಬರುತ್ತಿರುವ ಜನರಿಂದ ನನ್ನನ್ನು ರಕ್ಷಿಸು. [QBR]
16. ದಯವಿಟ್ಟು ನಿನ್ನ ಸೇವಕನನ್ನು ಸ್ವೀಕರಿಸಿಕೊ. [QBR2] ಕರುಣೆಯಿಂದ ನನ್ನನ್ನು ರಕ್ಷಿಸು! [QBR]
17. ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. [QBR2] ಆದ್ದರಿಂದ ನಾನು ನಿರಾಶನಾಗುವುದಿಲ್ಲ. [QBR] ಕೆಡುಕರಾದರೋ ನಿರಾಶರಾಗುವರು. [QBR2] ಅವರು ಮೌನವಾಗಿ ಸಮಾಧಿಗೆ ಹೋಗುವರು. [QBR]
18. ಕೆಡುಕರು ಜಂಬಕೊಚ್ಚಿಕೊಳ್ಳುತ್ತಾ [QBR2] ಒಳ್ಳೆಯವರ ಬಗ್ಗೆ ಸುಳ್ಳು ಹೇಳುವರು. [QBR] ಅವರು ದುರಹಂಕಾರಿಗಳಾಗಿದ್ದಾರೆ; [QBR2] ಅವರ ಸುಳ್ಳುತುಟಿಗಳು ಮೌನಗೊಳ್ಳುತ್ತವೆ.
19. ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. [QBR2] ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ [QBR2] ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ. [QBR]
20. ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. [QBR2] ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; [QBR2] ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ. [QBR]
21. ಯೆಹೋವನಿಗೆ ಸ್ತೋತ್ರವಾಗಲಿ! ವೈರಿಗಳು ಈ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ [QBR2] ಆತನು ತನ್ನ ಶಾಶ್ವತ ಪ್ರೀತಿಯನ್ನು ಆಶ್ಚರ್ಯಕರವಾಗಿ ತೋರಿದ್ದಾನೆ. [QBR]
22. ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. [QBR2] ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.
23. ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! [QBR2] ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು. [QBR]
24. ಯೆಹೋವನನ್ನು ನಿರೀಕ್ಷಿಸಿಕೊಂಡಿರುವವರೇ, ದೃಢವಾಗಿಯೂ ಧೈರ್ಯವಾಗಿಯೂ ಇರಿ. [PE]