ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ [QBR2] ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ [QBR2] ಅವನೇ ಧನ್ಯನು. [QBR]
2. ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ [QBR2] ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ [QBR2] ಅವನೇ ಧನ್ಯನು.
3. ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ [QBR2] ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; [QBR2] ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು. [QBR]
4. ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. [QBR2] ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು.
5. ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. [QBR2] ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. [QBR2] ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. [QBR]
6. ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತ್ತರು ನಿನ್ನಲ್ಲಿ ಪ್ರಾರ್ಥಿಸಲಿ. [QBR2] ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು. [QBR]
7. ನೀನು ನನಗೆ ಆಶ್ರಯದುರ್ಗವಾಗಿರುವೆ. [QBR2] ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ. [QBR] ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ. [QBR]
8. ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವ ಮಾರ್ಗವನ್ನು ಉಪದೇಶಿಸಿ [QBR2] ಮಾರ್ಗದರ್ಶನ ನೀಡುವೆನು; [QBR2] ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು. [QBR]
9. ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. [QBR2] ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.”
10. ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. [QBR2] ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು. [QBR]
11. ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. [QBR2] ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 150
1 ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.
2 ಯೆಹೋವನು ಯಾವನನ್ನು ದೋಷಿಯೆಂದು ಹೇಳುವುದಿಲ್ಲವೋ ಯಾವನು ತನ್ನ ಗುಪ್ತಪಾಪಗಳನ್ನು ಅಡಗಿಸಿಟ್ಟುಕೊಳ್ಳುವುದಿಲ್ಲವೋ ಅವನೇ ಧನ್ಯನು. 3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.
4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು. ನಾನು ಬೇಸಿಗೆಯಲ್ಲಿ ಒಣಗಿಹೋದ ಭೂಮಿಯಂತಾದೆನು. 5 ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.
6 ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು.
7 ನೀನು ನನಗೆ ಆಶ್ರಯದುರ್ಗವಾಗಿರುವೆ. ಇಕ್ಕಟ್ಟುಗಳಲ್ಲಿ ನೀನು ನನ್ನನ್ನು ಸುತ್ತುವರಿದು ಕಾಪಾಡುವೆ.
ಆದ್ದರಿಂದ ನಿನ್ನ ರಕ್ಷಣೆಯ ಕುರಿತು ಹಾಡಿಕೊಂಡಾಡುವೆ.
8 ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವ ಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.
9 ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.” 10 ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು.
11 ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 32 / 150
×

Alert

×

Kannada Letters Keypad References