3. ಈಟಿಯನ್ನೂ ಭಲ್ಲೆಯನ್ನೂ ತೆಗೆದುಕೊ. ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. “ನಾನು ನಿನ್ನನ್ನು ರಕ್ಷಿಸುತ್ತೇನೆ” ಎಂಬ ಅಭಯವಚನ ನೀಡು.
|
4. ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. ನನಗೆ ಕೇಡು ಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ.
|
8. ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.
|
10. ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, “ನಿನಗೆ ಸಮಾನರು ಇಲ್ಲವೇ ಇಲ್ಲ. ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.”
|
12. ನಾನು ಅವರಿಗೆ ಉಪಕಾರಗಳನ್ನು ಮಾಡಿದ್ದರೂ ಅವರು ನನಗೆ ಅಪಕಾರಗಳನ್ನೇ ಮಾಡುತ್ತಾರೆ. ಯೆಹೋವನೇ, ನನಗೆ ಯೋಗ್ಯವಾದವುಗಳನ್ನು ದಯಪಾಲಿಸು.
|
13. ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ?
|
14. ಅವರು ಅಸ್ವಸ್ಥರಾಗಿದ್ದಾಗ ಶೋಕವಸ್ತ್ರಗಳನ್ನು ಧರಿಸುತ್ತಿದ್ದೆನು. ಅವರನ್ನು ನನ್ನ ಸ್ನೇಹಿತರಂತೆಯೂ ಸಹೋದರರಂತೆಯೂ ಉಪಚರಿಸಿದೆನು. ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅತ್ತೆನು.
|
15. ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿಮಾಡಿದರು, ಅವರು ನನ್ನ ನಿಜವಾದ ಸ್ನೇಹಿತರಲ್ಲ. ಅವರ ಪರಿಚಯವೂ ನನಗಿರಲಿಲ್ಲ. ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು.
|
17. ನನ್ನ ಒಡೆಯನೇ, ಇವುಗಳನ್ನು ಇನ್ನೆಷ್ಟುಕಾಲ ನೋಡುತ್ತಾ ಇರುವೆ? ಅವರು ನನ್ನನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. ನನ್ನ ಪ್ರಾಣವನ್ನು ರಕ್ಷಿಸು. ಸಿಂಹಗಳಂತಿರುವ ಆ ದುಷ್ಟರಿಂದ ನನ್ನ ಪ್ರಿಯ ಪ್ರಾಣವನ್ನು ರಕ್ಷಿಸು.
|
19. ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು.
|
20. ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ.
|
24. ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದಕೊಡಬೇಡ.
|
25. ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದಕೊಡಬೇಡ.
|
26. ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. ನನಗೆ ಕೇಡಾದಾಗ ಅವರು ಸಂತೋಷಪಟ್ಟರು; ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ.
|
27. ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. “ಯೆಹೋವನು ಎಷ್ಟೋ ದೊಡ್ಡವನು! ಆತನು ತನ್ನ ಸೇವಕನಿಗೆ ಅತ್ಯುತ್ತಮವಾದುದನ್ನೇ ಮಾಡಿದನು” ಎಂದು ಅವರು ಹೇಳುತ್ತಲೇ ಇರಲಿ.
|