1. ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! [QBR2] ನನ್ನ ಯುದ್ಧಗಳಲ್ಲಿ ಹೋರಾಡು! [QBR]
2. ಯೆಹೋವನೇ, ಗುರಾಣಿಗಳನ್ನು ಹಿಡಿದುಕೊಂಡು [QBR2] ನನಗೆ ಸಹಾಯಕನಾಗಿ ನಿಲ್ಲು. [QBR]
3. ಈಟಿಯನ್ನೂ ಭಲ್ಲೆಯನ್ನೂ [*ಭಲ್ಲೆ ಈಟಿಯಂಥ ಒಂದು ಆಯುಧ.] ತೆಗೆದುಕೊ. [QBR2] ನನ್ನನ್ನು ಬೆನ್ನಟ್ಟಿಕೊಂಡು ಬರುತ್ತಿರುವ ವೈರಿಗಳೊಡನೆ ಹೋರಾಡು. [QBR] “ನಾನು ನಿನ್ನನ್ನು ರಕ್ಷಿಸುತ್ತೇನೆ” ಎಂಬ ಅಭಯವಚನ ನೀಡು.
4. ನನ್ನನ್ನು ಕೊಲ್ಲಬೇಕೆಂದಿರುವವರು ನಿರಾಶೆಗೊಂಡು ನಾಚಿಕೆಗೀಡಾಗಲಿ. [QBR2] ನನಗೆ ಕೇಡುಮಾಡಬೇಕೆಂದಿರುವವರು ಅವಮಾನಗೊಂಡು ಓಡಿಹೋಗಲಿ. [QBR]
5. ಅವರು ಗಾಳಿಬಡಿದುಕೊಂಡು ಹೋಗುವ ಹೊಟ್ಟಿನಂತಾಗಲಿ; [QBR2] ಯೆಹೋವನ ದೂತನು ಅವರನ್ನು ಹಿಂದಟ್ಟಲಿ. [QBR]
6. ಯೆಹೋವನೇ, ಅವರ ರಸ್ತೆಯು ಕತ್ತಲಾಗಿರಲಿ; ಜಾರುತ್ತಿರಲಿ. [QBR2] ಯೆಹೋವನ ದೂತನು ಅವರನ್ನು ಹಿಂದಟ್ಟಲಿ. [QBR]
7. ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. [QBR2] ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ. [QBR]
8. ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; [QBR2] ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. [QBR2] ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ. [QBR]
9. ಆಗ ನಾನು ಯೆಹೋವನಲ್ಲಿ ಹರ್ಷಿಸುವೆನು. [QBR2] ಆತನು ನನ್ನನ್ನು ರಕ್ಷಿಸಿದ್ದರಿಂದ ಸಂತೋಷಪಡುವೆನು. [QBR]
10. ಯೆಹೋವನೇ, ಹೃದಯಪೂರ್ವಕವಾಗಿ ಹೇಳುವೆ, [QBR2] “ನಿನಗೆ ಸಮಾನರು ಇಲ್ಲವೇ ಇಲ್ಲ. [QBR] ಬಡವರನ್ನು ಬಲಿಷ್ಠರಿಂದ ತಪ್ಪಿಸಿ ರಕ್ಷಿಸುವಾತನು ನೀನೇ. [QBR2] ಬಲಿಷ್ಠರನ್ನು ಸೂರೆಮಾಡಿ ಬಡವರಿಗೂ ಅಸಹಾಯಕರಿಗೂ ಕೊಡುವಾತನು ನೀನೇ.” [QBR]
11. ಸುಳ್ಳುಸಾಕ್ಷಿಗಳು ನನಗೆ ಕೇಡುಮಾಡಬೇಕೆಂದಿದ್ದಾರೆ. [QBR2] ನನಗೆ ತಿಳಿಯದ ವಿಷಯಗಳ ಮೇಲೆ ಅವರು ಪ್ರಶ್ನೆಗಳನ್ನು ಕೇಳುವರು. [QBR]
12. ನಾನು ಅವರಿಗೆ ಉಪಕಾರಗಳನ್ನು ಮಾಡಿದ್ದರೂ ಅವರು ನನಗೆ ಅಪಕಾರಗಳನ್ನೇ ಮಾಡುತ್ತಾರೆ. [QBR2] ಯೆಹೋವನೇ, ನನಗೆ ಯೋಗ್ಯವಾದವುಗಳನ್ನು ದಯಪಾಲಿಸು. [QBR]
13. ಅವರು ಅಸ್ವಸ್ಥರಾಗಿದ್ದಾಗ ನಾನು ದುಃಖಪಟ್ಟೆನು; ಉಪವಾಸ ಮಾಡಿದೆನು. [QBR2] ನಾನು ಅವರಿಗೋಸ್ಕರ ಪ್ರಾರ್ಥಿಸಿದ್ದಕ್ಕೆ ಇದು ನನಗೆ ಪ್ರತಿಫಲವೇ? [QBR]
14. ಅವರು ಅಸ್ವಸ್ಥರಾಗಿದ್ದಾಗ ಶೋಕವಸ್ತ್ರಗಳನ್ನು ಧರಿಸುತ್ತಿದ್ದೆನು. [QBR2] ಅವರನ್ನು ನನ್ನ ಸ್ನೇಹಿತರಂತೆಯೂ ಸಹೋದರರಂತೆಯೂ ಉಪಚರಿಸಿದೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅತ್ತೆನು. [QBR]
15. ಆದರೆ ನಾನು ಆಪತ್ತಿನಲ್ಲಿದ್ದಾಗ ಅವರು ನನ್ನನ್ನು ಗೇಲಿಮಾಡಿದರು, [QBR2] ಅವರು ನನ್ನ ನಿಜವಾದ ಸ್ನೇಹಿತರಲ್ಲ; [QBR] ಅವರ ಪರಿಚಯವೂ ನನಗಿರಲಿಲ್ಲ. [QBR2] ಅವರು ನನ್ನ ಸುತ್ತಲೂ ಸೇರಿಬಂದು ನನ್ನ ಮೇಲೆ ಆಕ್ರಮಣ ಮಾಡಿದರು. [QBR]
16. ಅವರು ಕೆಟ್ಟಮಾತಿನಿಂದ ನನ್ನನ್ನು ಹಾಸ್ಯಮಾಡಿದರು; [QBR2] ನನ್ನ ಮೇಲಿನ ಕೋಪದಿಂದ ಹಲ್ಲುಕಡಿದರು.
17. ನನ್ನ ಒಡೆಯನೇ, ಇವುಗಳನ್ನು ಇನ್ನೆಷ್ಟುಕಾಲ ನೋಡುತ್ತಾ ಇರುವೆ? [QBR2] ಅವರು ನನ್ನನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದಾರೆ. [QBR2] ನನ್ನ ಪ್ರಾಣವನ್ನು ರಕ್ಷಿಸು; ಸಿಂಹಗಳಂತಿರುವ ಆ ದುಷ್ಟರಿಂದ ನನ್ನ ಪ್ರಿಯ ಪ್ರಾಣವನ್ನು ರಕ್ಷಿಸು.
18. ಆಗ ನಾನು ನಿನ್ನನ್ನು ಮಹಾಸಭೆಯಲ್ಲಿ ಸ್ತುತಿಸುವೆನು; [QBR2] ಬಲಿಷ್ಠರ ಸಮೂಹದಲ್ಲಿ ನಿನ್ನನ್ನು ಕೊಂಡಾಡುವೆನು. [QBR]
19. ಸುಳ್ಳುಗಾರರಾದ ನನ್ನ ವೈರಿಗಳು ಇನ್ನು ಮೇಲೆ ಹಿಗ್ಗಲಾರರು. [QBR2] ನನ್ನ ವೈರಿಗಳು ತಮ್ಮ ಒಳಸಂಚುಗಳಿಗೆ ಖಂಡಿತವಾಗಿ ದಂಡಿಸಲ್ಪಡುವರು. [QBR]
20. ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. [QBR2] ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ. [QBR]
21. ನನ್ನ ವೈರಿಗಳು ನನ್ನನ್ನು ದೂಷಿಸುವರು. [QBR2] “ಆಹಾ! ನೀನು ಮಾಡುತ್ತಿರುವುದು ನಮಗೆ ಗೊತ್ತು!” ಎನ್ನುವರು. [QBR]
22. ಯೆಹೋವನೇ, ಇದೆಲ್ಲವನ್ನೂ ನೀನು ನೋಡಿರುವೆ, [QBR2] ಆದ್ದಿರಂದ ಸುಮ್ಮನಿರಬೇಡ; ನನ್ನ ಕೈ ಬಿಡಬೇಡ. [QBR]
23. ಎಚ್ಚರಗೊಳ್ಳು! ಎದ್ದೇಳು! [QBR2] ನನ್ನ ದೇವರೇ, ಯೆಹೋವನೇ, ನನಗಾಗಿ ಹೋರಾಡು; ನನಗೆ ನ್ಯಾಯವನ್ನು ದೊರಕಿಸು. [QBR]
24. ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. [QBR2] ಅವರು ನನ್ನನ್ನು ನೋಡಿ ನಗಲು ಆಸ್ಪದ ಕೊಡಬೇಡ. [QBR]
25. ಅವರು, “ಆಹಾ! ನಾವು ಬಯಸಿದ್ದನ್ನೇ ಪಡೆದೆವು!” ಎಂದು ಹೇಳಲು ಅವಕಾಶಕೊಡಬೇಡ. [QBR2] “ನಾವು ಅವನನ್ನು ನಾಶಮಾಡಿದೆವು!” ಎಂದು ಹೇಳಲು ಅವರಿಗೆ ಆಸ್ಪದ ಕೊಡಬೇಡ. [QBR]
26. ನನ್ನ ವೈರಿಗಳೆಲ್ಲಾ ಅವಮಾನಕ್ಕೂ ನಾಚಿಕೆಗೂ ಗುರಿಯಾಗಲಿ. [QBR2] ನನಗೆ ಕೇಡಾದಾಗ ಅವರು ಸಂತೋಷಪಟ್ಟರು; [QBR] ತಮ್ಮನ್ನು ನನಗಿಂತಲೂ ಉತ್ತಮರೆಂದು ಭಾವಿಸಿಕೊಂಡರು! [QBR2] ಆದ್ದರಿಂದ ಅವರನ್ನು ಅವಮಾನವೂ ನಾಚಿಕೆಯೂ ಆವರಿಸಿಕೊಳ್ಳಲಿ. [QBR]
27. ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. [QBR2] “ಯೆಹೋವನು ಎಷ್ಟೋ ದೊಡ್ಡವನು! [QBR] ಆತನು ತನ್ನ ಸೇವಕನಿಗೆ ಅತ್ಯುತ್ತಮವಾದುದನ್ನೇ ಮಾಡಿದನು” ಎಂದು [QBR2] ಅವರು ಹೇಳುತ್ತಲೇ ಇರಲಿ.
28. ನಿನ್ನ ನೀತಿಯ ಕುರಿತು ನಾನು ಜನರಿಗೆ ಹೇಳುವೆನು; [QBR2] ಪ್ರತಿದಿನವೂ ನಿನ್ನನ್ನು ಸ್ತುತಿಸುವೆನು. [PE]