1. ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.
|
2. ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಪಮೆಯನ್ನು ಕೇಳುವುದೂ ಇಲ್ಲ.
|
4. ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.
|
6. ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.
|
8. ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು.
|
12. “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” ಎಂದು ಅವರ ಸಮಾಧಿಯ ಮೇಲೆ ಬರೆಯಿಸು.
|