ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ [QBR2] ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು. [QBR]
2. ಅವನು ತನ್ನನ್ನು ವಂಚಿಸಿಕೊಳ್ಳುವನು. [QBR2] ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, [QBR2] ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ. [QBR]
3. ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. [QBR2] ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ. [QBR]
4. ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. [QBR2] ಮರುದಿನ ಮುಂಜಾನೆ ಎದ್ದಾಗ, [QBR2] ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.
5. ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. [QBR2] ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ. [QBR]
6. ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. [QBR2] ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. [QBR] ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ. [QBR]
7. ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. [QBR2] ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು. [QBR]
8. ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. [QBR2] ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು. [QBR]
9. ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! [QBR2] ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ. [QBR]
10. ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. [QBR2] ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು. [QBR]
11. ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; [QBR2] ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ.
12. “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. [QBR2] ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” [QBR2] ಎಂದು ಅವರ ಸಮಾಧಿಯ ಮೇಲೆ ಬರೆಯಿಸು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 150
ಕೀರ್ತನೆಗಳು 36:169
1 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು. 2 ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ. 3 ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ. 4 ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು. 5 ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ. 6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ. 7 ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು. 8 ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು. 9 ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ. 10 ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು. 11 ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ. 12 “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” ಎಂದು ಅವರ ಸಮಾಧಿಯ ಮೇಲೆ ಬರೆಯಿಸು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 36 / 150
Common Bible Languages
West Indian Languages
×

Alert

×

kannada Letters Keypad References