3. ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.
|
7. ಯೆಹೋವನಲ್ಲಿ ಭರವಸವಿಟ್ಟು ಆತನ ಸಹಾಯಕ್ಕಾಗಿ ಕಾದುಕೊಂಡಿರು. ಕೆಡುಕರ ಅಭಿವೃದ್ಧಿಯನ್ನು ಕಂಡು ಉರಿಗೊಳ್ಳಬೇಡ. ಕೆಡುಕರ ಕುಯುಕ್ತಿಗಳು ನೆರವೇರಿದರೂ ಹೊಟ್ಟೇಕಿಚ್ಚುಪಡಬೇಡ.
|
12. ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು.
|
14. ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ.
|
20. ದುಷ್ಟರಾದರೊ ಯೆಹೋವನ ವೈರಿಗಳಾಗಿದ್ದಾರೆ. ಅವರು ನಾಶವಾಗುವರು. ಅವರ ಕಣಿವೆಗಳು ಒಳಗಿ ಸುಟ್ಟುಹೋಗುತ್ತವೆ; ಅವರು ಹೊಗೆಯಂತೆ ಇಲ್ಲವಾಗುವರು.
|
22. ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.
|
25. ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟಿದ್ದನ್ನಾಗಲೀ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.
|
28. ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.
|
33. ಆದರೆ ಯೆಹೋವನು ನೀತಿವಂತಿರನ್ನು ತೊರೆದುಬಿಡುವುದಿಲ್ಲ. ನೀತಿವಂತರಿಗೆ ಅಪರಾಧಿಗಳೆಂದು ತೀರ್ಪಾಗಲು ಆತನು ಬಿಡುವುದಿಲ್ಲ.
|
34. ಯೆಹೋವನನ್ನೇ ನಿರೀಕ್ಷಿಸಿಕೊಂಡು ಆತನ ಮಾರ್ಗವನ್ನು ಅನುಸರಿಸಿರಿ. ಆಗ ಆತನು ನಿಮ್ಮನ್ನು ಜಯಶಾಲಿಗಳನ್ನಾಗಿ ಮಾಡುವನು; ದೇವರು ವಾಗ್ದಾನ ಮಾಡಿದ ಭೂಮಿಯನ್ನು ನೀವು ಪಡೆದುಕೊಳ್ಳುವಿರಿ.
|
40. ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.
|