1. ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.
|
2. ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳುಅಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?
|
3. ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.
|
6. “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು.
|
7. ಧಾನ್ಯಗಳೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ.
|