ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! [QBR2] ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! [QBR] ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ [QBR2] ಸುರಕ್ಷಿತ ಸ್ಥಳದಲ್ಲಿ ಸೇರಿಸು.
2. ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? [QBR2] ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳುಅಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ?
3. ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. [QBR2] ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ.
4. ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. [QBR2] ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ. [QBR]
5. ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; [QBR2] ಯೆಹೋವನಲ್ಲಿಯೇ ಭರವಸೆಯಿಡಿರಿ!
6. “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? [QBR2] ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು. [QBR]
7. ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ. [QBR]
8. ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. [QBR2] ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 150
ಕೀರ್ತನೆಗಳು 4:56
1 ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು. 2 ಜನರೇ, ಇನ್ನೆಷ್ಟರವರೆಗೆ ನನ್ನ ಬಗ್ಗೆ ಕೆಟ್ಟದ್ದನ್ನು ಹೇಳುವಿರಿ? ಅಸತ್ಯವನ್ನೇ ಪ್ರೀತಿಸುತ್ತಾ, ನನ್ನ ಮೇಲೆ ಹೊರಿಸಲು ಸುಳ್ಳುಅಪವಾದಗಳಿಗಾಗಿ ಯಾಕೆ ಹುಡುಕುತ್ತಿದ್ದೀರಿ? 3 ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆಂಬುದು ನಿಮಗೆ ತಿಳಿದಿರಲಿ. ನಾನು ಮೊರೆಯಿಡುವಾಗಲೆಲ್ಲಾ ಆತನು ನನಗೆ ಕಿವಿಗೊಡುತ್ತಾನೆ. 4 ನೀವು ಕೋಪದಿಂದಿರುವಾಗ ಎಚ್ಚರಿಕೆಯಾಗಿದ್ದು ಪಾಪಮಾಡದಿರಿ. ಹಾಸಿಗೆಯ ಮೇಲಿರುವಾಗ ಹೃದಯಗಳನ್ನು ಪರೀಕ್ಷಿಸಿಕೊಳ್ಳಿರಿ. 5 ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ! 6 “ನಮಗೆ ಒಳ್ಳೆಯದನ್ನು ಯಾರು ತೋರಿಸುವರು? ಯೆಹೋವನೇ, ನಿನ್ನ ಪ್ರಕಾಶಮಾನವಾದ ಮುಖವನ್ನು ನಾವು ನೋಡುವಂತಾಗಲಿ!” ಎಂದು ಅನೇಕರು ಅಂದುಕೊಳ್ಳುವರು. 7 ಧಾನ್ಯಯವೂ ದ್ರಾಕ್ಷಿಯೂ ಸಮೃದ್ಧಿಯಾಗಿ ಬೆಳೆದ ಸುಗ್ಗಿಕಾಲದಲ್ಲಿ ಜನರಲ್ಲಿರುವ ಸಂತೋಷಕ್ಕಿಂತಲೂ ಅಧಿಕವಾದ ಆನಂದವನ್ನು ನೀನು ನನ್ನ ಹೃದಯದಲ್ಲಿ ತುಂಬಿರುವೆ. 8 ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 4 / 150
Common Bible Languages
West Indian Languages
×

Alert

×

kannada Letters Keypad References