2. ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.
|
3. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು!
|
4. ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ.
|
5. ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, ಅವನ ಹೆಸರು ಯಾವಾಗ ಅಳಿದು ಹೋಗುತ್ತದೆ” ಎಂದು ಹೇಳುತ್ತಿದ್ದಾರೆ.
|
6. ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು; ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು.
|
8. “ಅವನು ಯಾವುದೊ ತಪ್ಪು ಮಾಡಿರುವುದರಿಂದ ಅವನಿಗೆ ಕಾಯಿಲೆ ಬಂದಿದೆ, ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ.
|
9. ನನ್ನ ಆಪ್ತಸ್ನೇಹಿತನೊಂದಿಗೆ ಊಟ ಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.
|
11. ನನಗೆ ಕೇಡು ಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು.
|