1. ಯಾವನು ಬಡಜನರನ್ನು [*ಬಡಜನರು … ಪಡೆದುಕೊಳ್ಳುವನು ಅಥವಾ, “ಬಡಜನರಿಗೆ ಉಪದೇಶಿಸುವವನು ಧನ್ಯನೇ ಸರಿ.”] ಅಭಿವೃದ್ಧಿಪಡಿಸುವನೋ ಅವನೇ ಧನ್ಯನು. [QBR2] ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು. [QBR]
2. ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. [QBR2] ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. [QBR2] ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ. [QBR]
3. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ [QBR2] ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು!
4. ನಾನು ಆತನಿಗೆ, “ಯೆಹೋವನೇ, ನನಗೆ ದಯೆತೋರು. [QBR2] ನಾನು ನಿನಗೆ ವಿರೋಧವಾಗಿ ಪಾಪಮಾಡಿದ್ದೇನೆ, ಆದರೂ ನನ್ನನ್ನು ಕ್ಷಮಿಸಿ ಗುಣಪಡಿಸು” ಎಂದು ಹೇಳಿದೆ. [QBR]
5. ನನ್ನ ಶತ್ರುಗಳು ನನ್ನನ್ನು ದೂಷಿಸುತ್ತಾ “ಅವನು ಯಾವಾಗ ಸಾಯುತ್ತಾನೆ, [QBR2] ಅವನ ಹೆಸರು ಯಾವಾಗ ಅಳಿದುಹೋಗುತ್ತದೆ” ಎಂದು ಹೇಳುತ್ತಿದ್ದಾರೆ. [QBR]
6. ನನ್ನನ್ನು ನೋಡಲು ಬಂದವರು ಕಪಟದ ಮಾತಾಡುವರು; [QBR2] ಅವರು ನನ್ನ ಸಮಾಚಾರವನ್ನು ಸಂಗ್ರಹಿಸಿಕೊಂಡು ಸುಳ್ಳುಸುದ್ದಿಯನ್ನು ಹಬ್ಬಿಸುವರು. [QBR]
7. ನನ್ನ ವೈರಿಗಳು ನನಗೆ ವಿರೋಧವಾಗಿ ಗುಟ್ಟಾಗಿ ಮಾತಾಡಿಕೊಳ್ಳುವರು; [QBR2] ನನಗೆ ಕೇಡುಮಾಡಲು ಆಲೋಚಿಸುವರು. [QBR]
8. “ಅವನು ಯಾವುದೋ ತಪ್ಪು ಮಾಡಿರುವುದರಿಂದ [QBR2] ಅವನಿಗೆ ಕಾಯಿಲೆ ಬಂದಿದೆ, [QBR2] ಅವನಿಗೆ ಗುಣವಾಗುವುದೇ ಇಲ್ಲ” ಎಂದು ಅವರು ಹೇಳುತ್ತಾರೆ. [QBR]
9. ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, [QBR2] ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ. [QBR]
10. ಯೆಹೋವನೇ, ದಯವಿಟ್ಟು ನನಗೆ ದಯೆತೋರು; [QBR2] ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿ ತೀರಿಸುವೆನು. [QBR]
11. ನನಗೆ ಕೇಡುಮಾಡಲು ವೈರಿಗೆ ನೀನು ಅವಕಾಶ ಕೊಡದಿದ್ದರೆ, [QBR2] ನೀನು ನನ್ನನ್ನು ಸ್ವೀಕರಿಸಿಕೊಂಡಿರುವೆ ಎಂದು ತಿಳಿದುಕೊಳ್ಳುವೆನು. [QBR]
12. ನಿರಪರಾಧಿಯಾದ ನನಗೆ ಸಹಾಯಮಾಡು. [QBR2] ನಿನ್ನ ಸನ್ನಿಧಿಯಲ್ಲಿ ಯಾವಾಗಲೂ ನಿನ್ನ ಸೇವೆ ಮಾಡಲು ನನಗೆ ಅವಕಾಶ ಮಾಡಿಕೊಡು.
13. ಇಸ್ರೇಲರ ದೇವರಾದ ಯೆಹೋವನನ್ನು ಕೊಂಡಾಡಿರಿ! [QBR2] ಆತನು ಯಾವಾಗಲೂ ಇದ್ದವನು; ಯಾವಾಗಲೂ ಇರುವವನು. ಆಮೆನ್, ಆಮೆನ್! [PE]