1. ದೇವರೇ, ಪೂರ್ವಕಾಲದಲ್ಲಿ ನೀನು ಮಾಡಿದ ಮಹತ್ಕಾರ್ಯಗಳ ಕುರಿತು ಕೇಳಿದ್ದೇವೆ. ಅವುಗಳ ಕುರಿತು ನಮ್ಮ ಪೂರ್ವಿಕರೇ ನಮಗೆ ತಿಳಿಸಿದರು.
|
2. ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.
|
3. ಈ ದೇಶವು ನಮಗೆ ದೊರೆತದ್ದು ನಮ್ಮ ಪೂರ್ವಿಕರ ಖಡ್ಗಗಳಿಂದಲ್ಲ. ಅವರನ್ನು ಜಯಶಾಲಿಗಳನ್ನಾಗಿ ಮಾಡಿದ್ದು ಅವರ ಭುಜಲವಲ್ಲ. ನಮ್ಮ ಪೂರ್ವಿಕರೊಂದಿಗೆ ನೀನಿದ್ದುದರಿಂದ ಅವರಿಗೆ ಜಯವು ದೊರೆಯಿತು. ದೇವರೇ, ನಿನ್ನ ಮಹಾಶಕ್ತಿಯು ಅವರನ್ನು ರಕ್ಷಿಸಿತು. ಅವರ ಮೇಲೆ ನಿನಗಿದ್ದ ಪ್ರೀತಿಯನ್ನು ಅದು ತೋರಿಸಿತು.
|
9. ಆದರೆ, ದೇವರೇ, ಈಗ ನೀನು ನಮ್ಮನ್ನು ಕೈಬಿಟ್ಟಿರುವೆ. ನಮ್ಮನ್ನು ಅವಮಾನಕ್ಕೆ ಗುರಿಮಾಡಿರುವೆ. ನೀನು ನಮ್ಮೊಂದಿಗೆ ಯುದ್ಧಕ್ಕೆ ಬರಲಿಲ್ಲ.
|
11. ಕೊಯ್ಯಲ್ಪಡುವ ಕುರಿಗಳೊ ಎಂಬಂತೆ ನೀನು ನಮ್ಮನ್ನು ಅವರಿಗೆ ಒಪ್ಪಿಸಿಕೊಟ್ಟಿರುವೆ; ಅನ್ಯ ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಟ್ಟಿರುವೆ.
|
13. ನೀನು ನಮ್ಮನ್ನು ನೆರೆಹೊರೆಯವರಿಗೆ ತಮಾಷೆಯನ್ನಾಗಿ ಮಾಡಿರುವೆ. ನಮ್ಮ ನೆರೆಹೊರೆಯವರು ನಮ್ಮನ್ನು ಕಂಡು ನಗುತ್ತಾರೆ; ನಮ್ಮನ್ನು ಗೇಲಿ ಮಾಡುತ್ತಾರೆ.
|
14. ನಾವು ಜನರಿಗೆ ಗಾದೆಯ ಮಾತಾಗಿದ್ದೇವೆ. ಸ್ವದೇಶವನ್ನು ಹೊಂದಿಲ್ಲದವರು ಸಹ ನಮ್ಮನ್ನು ಕಂಡು ತಲೆಯಾಡಿಸುತ್ತಾ ನಗುತ್ತಾರೆ.
|
17. ನಾವು ನಿನ್ನನ್ನು ಮರೆತಿಲ್ಲದಿದ್ದರೂ ನಾವು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿಲ್ಲದಿದ್ದರೂ ಇವೆಲ್ಲಾ ನಮಗೆ ಬಂದಿವೆ.
|
19. ಆದರೆ ನರಿಗಳು ವಾಸಿಸುವ ಈ ಸ್ಥಳದಲ್ಲಿ ನೀನು ನಮ್ಮನ್ನು ಜಜ್ಜಿಹಾಕಿರುವೆ. ಮರಣದಂತೆ ಕತ್ತಲಾಗಿರುವ ಈ ಸ್ಥಳದಲ್ಲಿ ನೀನು ನಮ್ಮನ್ನು ತೊರೆದು ಬಿಟ್ಟಿರುವೆ.
|