1. ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿವೆ.
|
2. ನೀನು ಎಲ್ಲರಿಗಿಂತಲೂ ಅತಿಸುಂದರನಾಗಿರುವೆ. ನಿನ್ನ ಮಾತುಗಳು ಮನೋಹರವಾಗಿವೆ. ದೇವರ ಆಶೀರ್ವಾದವು ನಿನ್ನ ಮೇಲೆ ಸದಾಕಾಲವಿರುವುದು.
|
4. ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.
|
5. ನಿನ್ನ ಬಾಣಗಳು ತೀಕ್ಷ್ಣವಾಗಿವೆ. ಅವು ನಿನ್ನ ಶತ್ರುಗಳ ಎದೆಗೆ ನಾಟಿಕೊಳ್ಳುತ್ತವೆ; ಶತ್ರುಗಳು ನಿನ್ನ ಕಣ್ಣೆದುರಿನಲ್ಲೆ ನೆಲಕ್ಕುರುಳುವರು.
|
7. ನೀನು ನೀತಿಯನ್ನು ಪ್ರೀತಿಸುವೆ; ದುಷ್ಟತನವನ್ನು ದ್ವೇಷಿಸುವೆ. ಆದ್ದರಿಂದ ನಿನ್ನ ದೇವರಾಗಿರುವಾತನು ನಿನ್ನನ್ನು ನಿನ್ನ ಸ್ನೇಹಿತರಿಗೆ ರಾಜನನ್ನಾಗಿ ಆರಿಸಿಕೊಂಡಿದ್ದಾನೆ.
|
8. ನಿನ್ನ ಬಟ್ಟೆಗಳು ಪರಿಮಳ ದ್ರವ್ಯಗಳಾದ ಗೋಲರಸ, ಅಗರು ಮತ್ತು ಚಂದನಗಳಿಂದ ಕೂಡಿವೆ. ಗಜದಂತದಿಂದ ಶೃಂಗರಿಸಿರುವ ಅರಮನೆಗಳಲ್ಲಿ ನಿನ್ನನ್ನು ಸಂತೋಷಪಡಿಸಲು ವಾದ್ಯಗಳನ್ನು ನುಡಿಸುವರು.
|
9. ನಿನ್ನ ಸ್ತ್ರೀಪರಿವಾರದಲ್ಲಿರುವವರು ರಾಜಕುಮಾರಿಯರೇ, ನಿನ್ನ ಪಟ್ಟದರಾಣಿಯು ಓಫೀರ್ ದೇಶದ ಬಂಗಾರದಿಂದ ಮಾಡಿದ ಕಿರೀಟವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿರುವಳು.
|
11. ಆಗ ರಾಜನು ನಿನ್ನ ಸೌಂದರ್ಯವನ್ನು ಮೆಚ್ಚಿಕೊಳ್ಳುವನು. ಅವನು ನಿನಗೆ ಹೊಸ ಯಜಮಾನನಾಗಿರುವನು. ಆದ್ದರಿಂದ ನೀನು ಅವನನ್ನು ಗೌರವಿಸಬೇಕು.
|
16. ರಾಜನೇ, ನಿನ್ನ ಗಂಡುಮಕ್ಕಳು ನಿನ್ನ ತರುವಾಯ ಆಡಳಿತ ಮಾಡುವರು; ನೀನು ಅವರನ್ನು ನಿನ್ನ ದೇಶದಲ್ಲೆಲ್ಲಾ ಅಧಿಪತಿಗಳನ್ನಾಗಿ ನೇಮಿಸುವೆ.
|