ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. [QBR2] ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು. [QBR]
2. ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು [QBR2] ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ. [QBR]
3. ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ [QBR2] ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.
4. ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ [QBR2] ದೇವನಗರವನ್ನು ಸಂತೋಷಪಡಿಸುತ್ತದೆ. [QBR]
5. ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. [QBR2] ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು. [QBR]
6. ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; [QBR2] ಭೂಮಿಯು ಕರಗಿಹೋಗುವುದು. [QBR]
7. ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. [QBR2] ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ. [QBR]
8. ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; [QBR2] ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ. [QBR]
9. ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; [QBR2] ಬಿಲ್ಲುಗಳನ್ನೂ ಗುರಾಣಿಗಳನ್ನೂ [*ಗುರಾಣಿಗಳನ್ನು ಅಥವಾ ರಥಗಳನ್ನು.] ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.
10. ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! [QBR2] ನಾನು ಜನಾಂಗಗಳನ್ನು ಸೋಲಿಸುವೆನು! [QBR2] ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”
11. ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. [QBR2] ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 150
1 ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.
2 ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.
3 ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ. 4 ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.
5 ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.
6 ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.
7 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.
8 ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.
9 ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ *ಗುರಾಣಿಗಳನ್ನು ಅಥವಾ ರಥಗಳನ್ನು. ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು. 10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!” 11 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 46 / 150
×

Alert

×

Kannada Letters Keypad References