ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು
1. ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದ ಘೋಷಮಾಡಿರಿ!
2. ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.
3. ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ.
4. ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.
5. ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.
6. ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ.
7. ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.
8. ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.
9. ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!

Notes

No Verse Added

Total 150 Chapters, Current Chapter 47 of Total Chapters 150
ಕೀರ್ತನೆಗಳು 47:4
1. ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದ ಘೋಷಮಾಡಿರಿ!
2. ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ.
3. ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ.
4. ದೇವರು ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ದೇಶವನ್ನು ಆರಿಸಿಕೊಂಡನು.
5. ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.
6. ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ.
7. ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ.
8. ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು.
9. ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!
Total 150 Chapters, Current Chapter 47 of Total Chapters 150
×

Alert

×

kannada Letters Keypad References