ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; [QBR2] ದೇವರಿಗೆ ಆನಂದಘೋಷ ಮಾಡಿರಿ! [QBR]
2. ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. [QBR2] ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ. [QBR]
3. ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ [QBR2] ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ. [QBR]
4. ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; [QBR2] ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು.
5. ಯೆಹೋವನು ಆನಂದಘೋಷದೊಡನೆಯೂ [QBR2] ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು. [QBR]
6. ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. [QBR2] ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. [QBR]
7. ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; [QBR2] ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. [QBR]
8. ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; [QBR2] ದೇವರು ಎಲ್ಲಾ ಜನಾಂಗಗಳನ್ನು ಆಳುವನು. [QBR]
9. ಜನಾಂಗಗಳ ನಾಯಕರು [QBR2] ಅಬ್ರಹಾಮನ ದೇವಜನರೊಡನೆ ಕೂಡಿಬರುವರು. [QBR] ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. [QBR2] ದೇವರು ಅವರಿಗೆ ಸರ್ವಾಧಿಕಾರಿ! [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 150
ಕೀರ್ತನೆಗಳು 47:94
1 ಸರ್ವಜನಾಂಗಗಳೇ, ಚಪ್ಪಾಳೆ ತಟ್ಟಿರಿ; ದೇವರಿಗೆ ಆನಂದಘೋಷ ಮಾಡಿರಿ! 2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ. ಆತನು ಭೂಲೋಕಕ್ಕೆಲ್ಲಾ ಮಹಾರಾಜನಾಗಿದ್ದಾನೆ. 3 ಆತನು ಜನಾಂಗಗಳನ್ನು ಸೋಲಿಸಲು ನಮಗೆ ಸಹಾಯಮಾಡಿ ಅವುಗಳನ್ನು ನಮಗೆ ಅಧೀನಪಡಿಸಿದ್ದಾನೆ. 4 ದೇವರು ಈ ದೇಶವನ್ನು ನಮಗೋಸ್ಕರವಾಗಿ ಆರಿಸಿಕೊಂಡನು; ತನಗೆ ಪ್ರಿಯರಾದ ಯಾಕೋಬನ ವಂಶಸ್ಥರಿಗಾಗಿ ಆತನು ಮನೋಹರವಾದ ಈ ದೇಶವನ್ನು ಆರಿಸಿಕೊಂಡನು. 5 ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು. 6 ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. 7 ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. 8 ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; ದೇವರು ಎಲ್ಲಾ ಜನಾಂಗಗಳನ್ನು ಆಳುವನು. 9 ಜನಾಂಗಗಳ ನಾಯಕರು ಅಬ್ರಹಾಮನ ದೇವಜನರೊಡನೆ ಕೂಡಿಬರುವರು. ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. ದೇವರು ಅವರಿಗೆ ಸರ್ವಾಧಿಕಾರಿ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 47 / 150
Common Bible Languages
West Indian Languages
×

Alert

×

kannada Letters Keypad References