ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ ಮಹೋನ್ನತನು. [QBR2] ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು. [QBR]
2. ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. [QBR2] ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು. [QBR] ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. [QBR2] ಅದೇ ಆ ಮಹಾರಾಜನ ಪರ್ವತ. [QBR]
3. ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, [QBR2] ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ. [QBR]
4. ಒಮ್ಮೆ, ಕೆಲವು ರಾಜರು ಒಟ್ಟಾಗಿ ಸೇರಿಬಂದರು. [QBR2] ಆ ಪಟ್ಟಣದ ಮೇಲೆ ದಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು. [QBR]
5. ಆದರೆ ಅವರು ಅದನ್ನು ಕಂಡಾಗ ದಿಗ್ಭ್ರಮೆಗೊಂಡರು; [QBR2] ಭಯದಿಂದ ಓಡಿಹೋದರು. [QBR]
6. ಭಯವು ಅವರನ್ನು [QBR2] ಪ್ರಸವವೇದನೆಯಂತೆ ಆವರಿಸಿಕೊಂಡಿತು. [QBR]
7. ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ [QBR2] ನೀನು ಅವರನ್ನು ನಾಶಮಾಡಿದೆ. [QBR]
8. ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. [QBR2] ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ. [QBR] ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.
9. ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು. [QBR]
10. ದೇವರೇ, ನೀನು ಪ್ರಖ್ಯಾತನಾಗಿರುವೆ. [QBR2] ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. [QBR2] ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ. [QBR]
11. ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; [QBR2] ಯೆಹೂದದ ಊರುಗಳು ಉಲ್ಲಾಸಿಸಲಿ. [QBR]
12. ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. [QBR2] ಅದರ ಬುರುಜುಗಳನ್ನು ಎಣಿಸಿರಿ. [QBR]
13. ಅದರ ಕೋಟೆಗಳನ್ನು ನೋಡಿರಿ. [QBR2] ಚೀಯೋನಿನ ಅರಮನೆಗಳನ್ನು ಹೊಗಳಿರಿ. [QBR] ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ. [QBR]
14. ಈ ದೇವರೇ ಎಂದೆಂದಿಗೂ ನಮ್ಮ ದೇವರು! [QBR2] ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ! [PE]
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 48 / 150
1 ಯೆಹೋವನೇ ಮಹೋನ್ನತನು. ನಮ್ಮ ದೇವರನ್ನು ಆತನ ಪವಿತ್ರ ಪರ್ವತ ಪಟ್ಟಣದಲ್ಲಿ ಜನರು ಬಹಳವಾಗಿ ಕೊಂಡಾಡುವರು.
2 ದೇವರ ಪವಿತ್ರ ಪಟ್ಟಣವು ರಮ್ಯವಾಗಿದೆ. ಭೂಲೋಕದಲ್ಲೆಲ್ಲಾ ಇರುವ ಜನರನ್ನು ಅದು ಸಂತೋಷಗೊಳಿಸುವುದು.
ಸಿಯೋನ್ ಪರ್ವತವೇ ದೇವರ ನಿಜವಾದ ಪರ್ವತ. ಅದೇ ಆ ಮಹಾರಾಜನ ಪರ್ವತ.
3 ದೇವರು ಆ ಪಟ್ಟಣಗಳ ಅರಮನೆಗಳಲ್ಲಿ, ತಾನೇ ಆಶ್ರಯದುರ್ಗವೆಂದು ಹೆಸರುವಾಸಿಯಾಗಿದ್ದಾನೆ.
4 ಒಮ್ಮೆ, ಕೆಲವು ರಾಜರು ಒಟ್ಟಾಗಿ ಸೇರಿಬಂದರು. ಆ ಪಟ್ಟಣದ ಮೇಲೆ ದಾಳಿ ಮಾಡಲೆಂದು ಅವರೆಲ್ಲ ಅದರತ್ತ ನಡೆದರು.
5 ಆದರೆ ಅವರು ಅದನ್ನು ಕಂಡಾಗ ದಿಗ್ಭ್ರಮೆಗೊಂಡರು; ಭಯದಿಂದ ಓಡಿಹೋದರು.
6 ಭಯವು ಅವರನ್ನು ಪ್ರಸವವೇದನೆಯಂತೆ ಆವರಿಸಿಕೊಂಡಿತು.
7 ಪೂರ್ವದ ಬಿರುಗಾಳಿಯಿಂದ ಒಡೆದುಹೋದ ಹಡಗುಗಳಂತೆ ನೀನು ಅವರನ್ನು ನಾಶಮಾಡಿದೆ.
8 ಹೌದು, ಆ ರಾಜರುಗಳಿಗೆ ಸಂಭವಿಸಿದ್ದನ್ನು ನಾವು ಕಿವಿಯಾರೆ ಕೇಳಿದಂತೆಯೇ ಕಣ್ಣಾರೆಯೂ ಕಂಡೆವು. ನಮ್ಮ ದೇವರೂ ಸೇನಾಧೀಶ್ವರನೂ ಆಗಿರುವ ಯೆಹೋವನ ಪಟ್ಟಣದಲ್ಲಿ ನಾವು ಅದನ್ನು ನೋಡಿದ್ದೇವೆ.
ದೇವರು ಆ ಪಟ್ಟಣವನ್ನು ಶಾಶ್ವತವಾಗಿ ಭದ್ರಗೊಳಿಸುವನು.
9 ದೇವರೇ, ನಿನ್ನ ಆಲಯದಲ್ಲಿ ನಿನ್ನ ಶಾಶ್ವತ ಪ್ರೀತಿಯ ಕುರಿತು ಧ್ಯಾನಿಸುವೆವು.
10 ದೇವರೇ, ನೀನು ಪ್ರಖ್ಯಾತನಾಗಿರುವೆ. ಭೂಮಿಯ ಮೇಲೆಲ್ಲಾ ಜನರು ನಿನ್ನನ್ನು ಕೊಂಡಾಡುವರು. ನೀನು ಎಷ್ಟು ಒಳ್ಳೆಯವನೆಂಬುದು ಪ್ರತಿಯೊಬ್ಬರಿಗೂ ತಿಳಿದಿದೆ.
11 ನಿನ್ನ ನ್ಯಾಯನಿರ್ಣಯಗಳಿಂದ ಚೀಯೋನ್ ಪರ್ವತವು ಹರ್ಷಿಸಲಿ; ಯೆಹೂದದ ಊರುಗಳು ಉಲ್ಲಾಸಿಸಲಿ.
12 ಚೀಯೋನಿನ ಸುತ್ತಲೂ ಸಂಚರಿಸಿ, ಆ ಪಟ್ಟಣವನ್ನು ನೋಡಿರಿ. ಅದರ ಬುರುಜುಗಳನ್ನು ಎಣಿಸಿರಿ.
13 ಅದರ ಕೋಟೆಗಳನ್ನು ನೋಡಿರಿ. ಚೀಯೋನಿನ ಅರಮನೆಗಳನ್ನು ಹೊಗಳಿರಿ.
ಆಗ ನೀವು ನಿಮ್ಮ ಮುಂದಿನ ಸಂತತಿಯವರಿಗೆ ಅದರ ಬಗ್ಗೆ ಹೇಳಬಲ್ಲಿರಿ.
14 ಈ ದೇವರೇ ಎಂದೆಂದಿಗೂ ನಮ್ಮ ದೇವರು! ನಮ್ಮನ್ನು ಶಾಶ್ವತವಾಗಿ ನಡೆಸುವಾತನು ಆತನೇ!
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 48 / 150
×

Alert

×

Kannada Letters Keypad References