4. ನಾನು ಅವುಗಳನ್ನು ಕಿವುಗೊಟ್ಟು ಕೇಳಿದ್ದೇನೆ. ನಾನು ಹಾರ್ಪ್ವಾದ್ಯವನ್ನು ನುಡಿಸುತ್ತಾ ಅವುಗಳನ್ನು ನಿಮಗಾಗಿ ಹಾಡುವೆನು.
|
5. ಆಪತ್ತು ಬಂದಾಗ ನಾನೇಕೆ ಭಯಪಡಬೇಕು? ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು?
|
7. ಯಾವ ಮಾನವ ಸ್ನೇಹಿತನೂ ನಿನ್ನನ್ನು ರಕ್ಷಿಸಲಾರನು. ಅಲ್ಲದೆ ದೇವರಿಗೆ ಈಡನ್ನು ಕೊಟ್ಟು ನಿನ್ನನ್ನು ಬಿಡಿಸಿಕೊಳ್ಳಲಾರನು.
|
9. ಸದಾಕಾಲ ಬದುಕುವ ಹಕ್ಕನ್ನು ಖರೀದಿಸಲು ಮತ್ತು ತನ್ನ ಸಮಾಧಿಯಲ್ಲಿ ತನ್ನ ಸ್ವಂತ ದೇಹ ಕೊಳೆಯದಂತೆ ಮಾಡಲು ಬೇಕಾಗುವಷ್ಟು ಹಣವನ್ನು ಯಾವನೂ ಪಡೆದುಕೊಳ್ಳಲಾರನು.
|
14. ಅವರು ಕುರಿಗಳಂತಿದ್ದಾರೆ. ಸಮಾಧಿಯೇ ಅವರ ಕೊಟ್ಟಿಗೆ. ಮರಣವೇ ಅವರ ಕುರುಬ. ಒಂದು ಮುಂಜಾನೆ, ಅವರ ದೇಹಗಳು ಅವರ ಮನೆಗಳಿಂದ ದೂರವಾಗಿ ಸಮಾಧಿಯಲ್ಲಿ ಕೊಳೆಯುತ್ತಿರಲು, ನೀತಿವಂತರು ಜಯಶಾಲಿಗಳಾಗಿರುವರು.
|
15. ಆದರೆ ದೇವರು ಈಡುಕೊಟ್ಟು ನನ್ನ ಪ್ರಾಣವನ್ನು ರಕ್ಷಿಸುವನು. ಆತನು ನನ್ನನ್ನು ತನ್ನೊಂದಿಗಿರಲು ಕೊಂಡೊಯ್ಯುವಾಗ ನನ್ನನ್ನು ಸಮಾಧಿಯ ಬಲದಿಂದ ರಕ್ಷಿಸುವನು.
|
16. ಜನರು ಐಶ್ವರ್ಯವಂತರಾಗಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ. ಜನರು ಭವ್ಯವಾದ ಮನೆಗಳಲ್ಲಿದ್ದ ಮಾತ್ರಕ್ಕೆ ನೀವು ಅವರಿಗೆ ಭಯಪಡಬೇಕಿಲ್ಲ.
|