1. ದೇವಾಧಿದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದವರೆಗೂ ಇರುವ ಭೂನಿವಾಸಿಗಳೆಲ್ಲರನ್ನು ತನ್ನ ಸನ್ನಿಧಿಗೆ ಬರಲು ಆಜ್ಞಾಪಿಸುವನು.
|
3. ನಮ್ಮ ದೇವರು ಬರುತ್ತಿದ್ದಾನೆ; ಆತನು ಸುಮ್ಮನಿರುವುದಿಲ್ಲ. ಆತನ ಮುಂಭಾಗದಲ್ಲಿ ಬೆಂಕಿಯು ಪ್ರಜ್ವಲಿಸುವುದು. ಆತನ ಸುತ್ತಲೂ ಬಿರುಗಾಳಿ ಬೀಸುವುದು.
|
5. ದೇವರು ಇಂತೆನ್ನುವನು: “ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆ ಮಾಡಿಕೊಂಡ ನನ್ನ ಪವಿತ್ರ ಪ್ರಜೆಗಳೇ, ನನ್ನ ಸುತ್ತಲೂ ಸೇರಿ ಬನ್ನಿರಿ” ಎಂದು ಆಜ್ಞಾಪಿಸುವನು.
|
7. ದೇವರು ಇಂತೆನ್ನುತ್ತಾನೆ: “ನನ್ನ ಜನರೇ, ಇಸ್ರೇಲರೇ, ನನಗೆ ಕಿವಿಗೊಡಿರಿ! ನಾನು ನಿಮಗೆ ವಿರುದ್ಧವಾಗಿ ಸಾಕ್ಷಿ ಹೇಳುವೆನು. ದೇವರಾದ ನಾನೇ ನಿಮ್ಮ ದೇವರು!
|
8. ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗ ಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.
|
9. ನಿಮ್ಮಮನೆಗಳಿಂದ ನಾನು ಹೋರಿಗಳನ್ನು ತೆಗೆದುಕೊಳ್ಳುವುದಿಲ್ಲ; ನಿಮ್ಮ ದೊಡ್ಡಿಗಳಿಂದ ಆಡುಗಳನ್ನು ತೆಗೆದುಕೊಳ್ಳುವುದಿಲ್ಲ.
|
11. ಅತ್ಯಂತ ಉನ್ನತವಾದ ಬೆಟ್ಟಗಳ ಮೇಲಿರುವ ಪಕ್ಷಿಗಳೆಲ್ಲಾ ನನಗೆ ಗೊತ್ತುಂಟು. ಬೆಟ್ಟಗಳ ಮೇಲೆ ಚಲಿಸುವ ಜೀವಜಂತುಗಳೆಲ್ಲಾ ನನ್ನವೇ.
|
15. ದೇವರು ಇಂತೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”
|
16. ದೇವರು ದುಷ್ಟರಿಗೆ ಇಂತೆನ್ನುವನು: “ನೀವು ನನ್ನ ಕಟ್ಟಳೆಗಳ ಕುರಿತು ಮಾತಾಡುವಿರಿ; ನನ್ನ ಒಡಂಬಡಿಕೆಯ ಕುರಿತು ಮಾತಾಡುವಿರಿ.
|
21. ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ನಿಮ್ಮಂಥವನೆಂದು ನೀವು ಆಲೋಚಿಸಿಕೊಂಡಿರಿ. ಈಗಲಾದರೋ ನಾನು ಮೌನವಾಗಿರುವುದಿಲ್ಲ! ಎಲ್ಲವನ್ನು ನಿಮಗೆ ವಿವರಿಸಿ ನಿಮ್ಮ ಮುಂದೆಯೇ ನಿಮ್ಮನ್ನು ಟೀಕಿಸುವೆನು!
|
22. ದೇವರನ್ನು ಮರೆತುಬಿಟ್ಟವರೇ, ಇದನ್ನು ಗಮನಕ್ಕೆ ತಂದುಕೊಳ್ಳಿರಿ. ಇಲ್ಲವಾದರೆ ತುಂಡುತಂಡು ಮಾಡುವೆನು; ಯಾರೂ ನಿಮ್ಮನ್ನು ರಕ್ಷಿಸಲಾರರು!
|
23. ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.
|