ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? [QBR2] ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ. [QBR]
2. ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು [QBR2] ನಾಶನದ ಸಂಚುಗಳನ್ನೇ ಮಾಡುವುದು. [QBR]
3. ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. [QBR2] ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.
4. ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. [QBR]
5. ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, [QBR2] ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ [*ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು.] ಕಿತ್ತು ಬೀಸಾಡುವನು.
6. ಒಳ್ಳೆಯವರು ಇದನ್ನು ಕಂಡು [QBR2] ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. [QBR] ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು: [QBR2]
7. “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? [QBR2] ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”
8. ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. [QBR2] ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ. [QBR]
9. ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. [QBR2] ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. [QBR2] ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 52 / 150
ಕೀರ್ತನೆಗಳು 52:114
1 ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ. 2 ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು. 3 ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ. ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ. 4 ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ. 5 ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು, ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ *ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು. ಕಿತ್ತು ಬೀಸಾಡುವನು. 6 ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು: 7 “ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.” 8 ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ. 9 ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು. ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು. ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 52 / 150
Common Bible Languages
West Indian Languages
×

Alert

×

kannada Letters Keypad References