2. ನನ್ನ ಮೊರೆಯನ್ನು ಆಲಿಸಿ ಸದುತ್ತರವನ್ನು ದಯಪಾಲಿಸು. ನಾನು ನಿನ್ನೊಂದಿಗೆ ಮಾತಾಡುವೆನು; ನನಗಾಗಿರುವ ದುಃಖವನ್ನು ನಿನ್ನ ಮುಂದೆ ತೋಡಿಕೊಳ್ಳುವೆನು.
|
3. ನನ್ನ ವೈರಿಗಳು ನನ್ನ ಬಗ್ಗೆ ಕೆಟ್ಟದ್ದನ್ನೇ ಹೇಳಿದರು. ಆ ದುಷ್ಟರು ನನ್ನ ಮೇಲೆ ಅಬ್ಬರಿಸಿದರು. ನನ್ನ ವೈರಿಗಳು ಕೋಪದಿಂದ ನನ್ನ ಮೇಲೆ ಆಕ್ರಮಣ ಮಾಡಿದರು. ಅವರು ನನ್ನ ಮೇಲೆ ಆಪತ್ತುಗಳನ್ನು ಬರಮಾಡಿದರು.
|
12. ನನಗೆ ಅವಮಾನ ಮಾಡುವವನು ವೈರಿಯಾಗಿದ್ದಿದ್ದರೆ ತಾಳಿಕೊಳ್ಳಬಹುದಿತ್ತು. ನನ್ನ ಮೇಲೆ ಆಕ್ರಮಣ ಮಾಡುವವರು ನನ್ನ ಶತ್ರುಗಳಾಗಿದ್ದಿದ್ದರೆ ಅಡಗಿಕೊಳ್ಳಬಹುದಿತ್ತು.
|
15. ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.
|
17. ನಾನು ದೇವರೊಂದಿಗೆ ಸಾಯಂಕಾಲದಲ್ಲಿಯೂ ಮುಂಜಾನೆಯಲ್ಲಿಯೂ ಮಧ್ಯಾಹ್ನದಲ್ಲಿಯೂ ಮಾತಾಡುವೆನು. ನನಗಾಗಿರುವ ದುಃಖವನ್ನು ಆತನಿಗೆ ಹೇಳಿಕೊಳ್ಳುವೆನು. ಆತನು ನನಗೆ ಕಿವಿಗೊಡುವನು!
|
18. ನಾನು ಅನೇಕ ಯುದ್ಧಗಳಲ್ಲಿ ಹೋರಾಡಿದ್ದೇನೆ. ಆದರೆ ಪ್ರತಿಸಲವೂ ದೇವರು ನನ್ನನ್ನು ಪಾರುಮಾಡಿ, ಸುರಕ್ಷಿತವಾಗಿ ಬರಮಾಡಿದನು.
|
22. ನನ್ನ ವೈರಿಗಳು ನಯ ನಾಜೂಕಿನಿಂದ ಶಾಂತಿಯ ಕುರಿತು ಮಾತಾಡುವರು; ಅಂತರಂಗದಲ್ಲಿಯೇ ಯುದ್ಧಗಳ ಕುರಿತು ಆಲೋಚಿಸುವರು. ಅವರ ಮಾತುಗಳು ಬೆಣ್ಣೆಯಂತೆ ನುಣುಪಾಗಿದ್ದರೂ ಅವರ ಹೃದಯಗಳು ಬಿಚ್ಚುಗತ್ತಿಗಳೇ ಸರಿ.
|
23. ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.
|