1. ರಚನೆಗಾರ : ದಾವೀದ. ದೇವರೇ, ನನ್ನನ್ನು ಕರುಣಿಸು; ವೈರಿಗಳು ನನ್ನ ಮೇಲೆ ಆಕ್ರಮಣಮಾಡಿದ್ದಾರೆ. ಅವರು ಸತತವಾಗಿ ನನ್ನನ್ನು ಬೆನ್ನಟ್ಟಿ ಹೋರಾಡುತ್ತಿದ್ದಾರೆ.
|
4. ನಾನು ದೇವರಲ್ಲಿ ಭರವಸೆ ಇಟ್ಟಿರುವುದರಿಂದ ಜನರಿಗೆ ಭಯಪಡುವುದಿಲ್ಲ. ಕ್ಷಣಿಕರಾದ ಮಾನವರು ನನಗೇನು ಮಾಡಬಲ್ಲರು? ದೇವರ ವಾಗ್ದಾನಕ್ಕಾಗಿ ಆತನನ್ನು ಕೊಂಡಾಡುವೆನು.
|
7. ದೇವರೇ, ಅವರ ದುಷ್ಟತನದ ನಿಮಿತ್ತ ಅವರನ್ನು ಸೆರೆಯಾಳುಗಳಾಗಿ ಕಳುಹಿಸು. ಅವರು ಅನ್ಯ ಜನಾಂಗಗಳ ಕೋಪವನ್ನು ಅನುಭವಿಸುವಂತೆ ಹೊರಗಟ್ಟು.
|
8. ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.
|
9. ಆದ್ದರಿಂದ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುವಾಗ ನನ್ನ ಶತ್ರುಗಳನ್ನು ಸೋಲಿಸು. ನೀನು ಮಾಡಬಲ್ಲೆ ಎಂದು ನನಗೆ ಗೊತ್ತಿದೆ; ನೀನೇ ದೇವರು!
|
10. ನಾನು ದೇವರನ್ನು ಆತನ ವಾಗ್ದಾನಕ್ಕಾಗಿ ಕೊಂಡಾಡುವೆನು. ಯೆಹೋವನು ನನಗೆ ಮಾಡಿರುವ ವಾಗ್ದಾನಕ್ಕಾಗಿ ನಾನು ಆತನನ್ನು ಕೊಂಡಾಡುವೆನು.
|
12. ದೇವರೇ, ನಾನು ನಿನಗೆ ವಿಶೇಷ ಹರಕೆಗಳನ್ನು ಮಾಡಿದ್ದೇನೆ. ನಾನು ಮಾಡಿದ ಹರಕೆಗಳನ್ನು ಸಲ್ಲಿಸುವೆನು. ನಾನು ನಿನಗೆ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸುವೆನು.
|
13. ಯಾಕಂದರೆ ನೀನು ನನ್ನನ್ನು ಮರಣದಿಂದ ರಕ್ಷಿಸಿದೆ; ನೀನು ನನ್ನನ್ನು ಸೋಲಿನಿಂದ ತಪ್ಪಿಸಿದೆ. ಆದ್ದರಿಂದ, ಜೀವಂತರಾಗಿರುವ ಜನರು ಮಾತ್ರ ನೋಡಬಹುದಾದ ಬೆಳಕಿನಲ್ಲಿ ನಾನು ದೇವರನ್ನು ಆರಾಧಿಸುವೆನು.
|