1. ರಚನೆಗಾರ : ದಾವೀದ. ದೇವರೇ, ನನ್ನನ್ನು ಕರುಣಿಸು, ನನ್ನನ್ನು ಕನಿಕರಿಸು. ನನ್ನ ಆತ್ಮವು ನಿನ್ನನ್ನೇ ಆಶ್ರಯಿಸಿಕೊಂಡಿದೆ. ಆಪತ್ತು ಕೊನೆಗೊಳ್ಳುವ ತನಕ ಸಂರಕ್ಷಣೆಗಾಗಿ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
|
3. ಆತನು ಪರಲೋಕದಿಂದ ನನಗೆ ಸಹಾಯಮಾಡಿ, ನನ್ನನ್ನು ಕಾಡಿಸುವವರನ್ನು ಸೋಲಿಸುವನು. ದೇವರು ತನ್ನ ಪ್ರೀತಿಯನ್ನೂ ನಂಬಿಗಸ್ತಿಕೆಯನ್ನೂ ತೋರ್ಪಡಿಸುವನು.
|
4. ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.
|
6. ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.
|
8. ನನ್ನ ಮನವೇ, ಎಚ್ಚರಗೊಳ್ಳು! ಹಾರ್ಪ್ ಮತ್ತು ಲೈರ್ ವಾದ್ಯಗಳೇ, ಎಚ್ಚರಗೊಳ್ಳಿರಿ. ಸಂ ಕೀರ್ತನೆಯಿಂದ ಸೂರ್ಯೋದಯವನ್ನು ಎದುರುಗೊಳ್ಳೋಣ.
|
9. ನನ್ನ ಒಡೆಯನೇ, ಜನಾಂಗಗಳ ನಡುವೆ ನಿನ್ನನ್ನು ಕೊಂಡಾಡುವೆನು. ಎಲ್ಲಾ ದೇಶಗಳಲ್ಲಿ ನಿನಗೆ ಸ್ತುತಿ ಗೀತೆಗಳನ್ನು ಹಾಡುವೆನು.
|
10. ಯಾಕಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ.
|