ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? [QBR2] ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ? [QBR]
2. ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; [QBR2] ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ. [QBR]
3. ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. [QBR2] ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ. [QBR]
4. ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯಕರ. [*ವಿಷದಷ್ಟೇ ಅಪಾಯಕರ ಇದು ಶಬ್ದ ಚಮತ್ಕಾರ. ಹೀಬ್ರೂ ಪದ “ಬಿಸಿಕೋಪವು,” “ಸುಡುವ ವಿಷವು” ಎಂಬಂತೆ ಉಚ್ಚರಿಸಲ್ಪಡುತ್ತದೆ.] [QBR2] ಕಿವುಡು ನಾಗರಹಾವಿನಂತೆ ಅವರು ಸತ್ಯಕ್ಕೆ ಕಿವಿಗೊಡುವುದಿಲ್ಲ. [QBR]
5. ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. [QBR2] ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು.
6. ಯೆಹೋವನೇ, ಅವರು ಸಿಂಹಗಳಂತಿದ್ದಾರೆ. [QBR2] ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು. [QBR]
7. ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. [QBR2] ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ. [QBR]
8. ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. [QBR2] ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ. [QBR]
9. ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು [QBR2] ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ.
10. ದುಷ್ಟರಿಗಾಗುವ ಪ್ರತಿದಂಡನೆಯನ್ನು [QBR2] ನೀತಿವಂತರು ಕಂಡು ಹರ್ಷಿಸುವರು; [QBR] ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು. [QBR]
11. ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; [QBR2] ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 58 / 150
ಕೀರ್ತನೆಗಳು 58:94
1 ಅಧಿಪತಿಗಳೇ, ನಿಮ್ಮ ತೀರ್ಪುಗಳು ನ್ಯಾಯವಾಗಿವೆಯೋ? ನ್ಯಾಯಾಧಿಪತಿಗಳೇ, ನಿಮ್ಮ ತೀರ್ಪುಗಳು ಯಥಾರ್ಥವಾಗಿವೆಯೋ? 2 ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಅನ್ಯಾಯವನ್ನೇ. 3 ಆ ದುಷ್ಟರು ಹುಟ್ಟಿದಾಕ್ಷಣದಿಂದ ತಪ್ಪನ್ನು ಮಾಡತೊಡಗಿದರು. ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿದ್ದಾರೆ. 4 ಅವರ ಕೋಪವು ನಾಗರಹಾವಿನ ವಿಷದಷ್ಟೇ ಅಪಾಯಕರ. *ವಿಷದಷ್ಟೇ ಅಪಾಯಕರ ಇದು ಶಬ್ದ ಚಮತ್ಕಾರ. ಹೀಬ್ರೂ ಪದ “ಬಿಸಿಕೋಪವು,” “ಸುಡುವ ವಿಷವು” ಎಂಬಂತೆ ಉಚ್ಚರಿಸಲ್ಪಡುತ್ತದೆ. ಕಿವುಡು ನಾಗರಹಾವಿನಂತೆ ಅವರು ಸತ್ಯಕ್ಕೆ ಕಿವಿಗೊಡುವುದಿಲ್ಲ. 5 ಕಿವುಡು ನಾಗರಹಾವುಗಳು ಹಾವಾಡಿಗರ ಕೊಳಲ ನಾದವನ್ನು ಕೇಳಲಾರವು. ಆ ದುಷ್ಟರು ದುಷ್ಟಾಲೋಚನೆಗಳನ್ನು ಮಾಡುವಾಗ ಕಿವುಡು ನಾಗರಹಾವುಗಳಂತಿರುವರು. 6 ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು. 7 ಹರಿದು ಕಾಣದೆ ಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ. 8 ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ. 9 ಒಲೆಯಲ್ಲಿ ಉರಿದುಹೋಗುವ ಮುಳ್ಳುಕಡ್ಡಿಗಳನ್ನು ಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಾಶಮಾಡಲಿ. 10 ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು. 11 ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 58 / 150
Common Bible Languages
West Indian Languages
×

Alert

×

kannada Letters Keypad References