1. ರಚನೆಗಾರ : ದಾವೀದ. ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.
|
4. ಅವರು ನನ್ನ ಮೇಲೆ ಆಕ್ರಮಣ ಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. ಯೆಹೋವನೇ, ಸ್ವತಃ ನೀನೇ ಬಂದು ನೋಡು!
|
5. ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! ಅವರನ್ನು ದಂಡಿಸು! ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.
|
7. ತಮ್ಮ ನಾಲಿಗೆಗಳೇ ಆಯುಧಗಳೊ ಎಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.
|
10. ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು.
|
11. ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು.
|
12. ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.
|
13. ನೀನು ಅವರನ್ನು ಕೋಪದಿಂದ ನಾಶಮಾಡು. ಅವರನ್ನು ಸಂಪೂರ್ಣವಾಗಿ ನಾಶಮಾಡು. ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.
|
16. ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; ಯಾಕಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ.
|
17. ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. ಯಾಕಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. ನನ್ನನ್ನು ಪ್ರೀತಿಸುವ ದೇವರು ನೀನೇ!
|