1. ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. [QBR2] ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು. [QBR]
2. ಆ ದುಷ್ಟರಿಂದ ನನ್ನನ್ನು ವಿಮೋಚಿಸು. [QBR2] ಆ ಕೊಲೆಪಾತಕರಿಂದ ನನ್ನನ್ನು ರಕ್ಷಿಸು. [QBR]
3. ಇಗೋ, ನನ್ನನ್ನು ಕೊಲ್ಲಲು ಬಲಿಷ್ಠರು ಹೊಂಚುಹಾಕಿದ್ದ್ದಾರೆ. [QBR2] ಆದರೆ ನಾನು ಪಾಪವನ್ನಾಗಲಿ ಅಪರಾಧವನ್ನಾಗಲಿ ಮಾಡಿಲ್ಲ. [QBR]
4. ಅವರು ನನ್ನ ಮೇಲೆ ಆಕ್ರಮಣಮಾಡಲು ಬರುತ್ತಿದ್ದಾರೆ, ಆದರೆ ನಾನೇನು ತಪ್ಪು ಮಾಡಿಲ್ಲ. [QBR2] ಯೆಹೋವನೇ, ಸ್ವತಃ ನೀನೇ ಬಂದು ನೋಡು! [QBR]
5. ಸೇನಾಧೀಶ್ವರನಾದ ಯೆಹೋವನೇ, ಇಸ್ರೇಲರ ದೇವರೇ, ಎದ್ದೇಳು! [QBR2] ಅವರನ್ನು ದಂಡಿಸು! [QBR] ಆ ದುಷ್ಟ ದ್ರೋಹಿಗಳಿಗೆ ಕರುಣೆಯನ್ನೇ ತೋರಬೇಡ.
6. ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ [QBR2] ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. [QBR]
7. ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ [QBR2] ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. [QBR2] ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.
8. ಯೆಹೋವನೇ, ಅವರನ್ನು ನೋಡಿ ನಗು. [QBR2] ಅವರೆಲ್ಲರನ್ನು ಅಪಹಾಸ್ಯ ಮಾಡು. [QBR]
9. ನನ್ನ ಬಲವೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. [QBR2] ದೇವರೇ, ಬೆಟ್ಟಗಳ ಶಿಖರದಲ್ಲಿರುವ ಆಶ್ರಯದುರ್ಗ ನೀನೇ. [QBR]
10. ದೇವರು ನನ್ನನ್ನು ಪ್ರೀತಿಸುವನು; ನನ್ನ ಜಯಕ್ಕೆ ಆತನೇ ಸಹಾಯ ಮಾಡುವನು. [QBR2] ನನ್ನ ಶತ್ರುಗಳನ್ನು ಸೋಲಿಸಲು ಆತನೇ ನನಗೆ ನೆರವು ನೀಡುವನು. [QBR]
11. ಯೆಹೋವನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಕೊಲ್ಲಬೇಡ, ಇಲ್ಲವಾದರೆ, ನನ್ನ ಜನರು ಮರೆತುಬಿಡಬಹುದು. [QBR2] ನನ್ನ ಒಡಯನೇ, ಸಂರಕ್ಷಕನೇ, ಅವರನ್ನು ಚದರಿಸಿಬಿಡು; ನಿನ್ನ ಬಲದಿಂದ ಸೋಲಿಸಿಬಿಡು. [QBR]
12. ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. [QBR2] ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. [QBR2] ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ. [QBR]
13. ನೀನು ಅವರನ್ನು ಕೋಪದಿಂದ ನಾಶಮಾಡು. [QBR2] ಅವರನ್ನು ಸಂಪೂರ್ಣವಾಗಿ ನಾಶಮಾಡು. [QBR] ಯಾಕೋಬನ ವಂಶದವರನ್ನು ಆಳುತ್ತಿರುವವನು ನೀನೇ ಎಂದು ಆಗ ಲೋಕದವರಿಗೆಲ್ಲಾ ಗೊತ್ತಾಗುವುದು.
14. ಗುರುಗುಟ್ಟುತ್ತಾ ಬೀದಿಗಳಲ್ಲಿ ಅಡ್ಡಾಡುವ ನಾಯಿಗಳಂತೆ [QBR2] ಅವರು ಸಾಯಂಕಾಲದಲ್ಲಿ ಪಟ್ಟಣದಲ್ಲೆಲ್ಲಾ ಸುತ್ತಾಡುತ್ತಾರೆ. [QBR]
15. ಅವರು ಊಟಕ್ಕಾಗಿ ಹುಡುಕಾಡಿದರೂ ಸಿಕ್ಕುವುದಿಲ್ಲ; [QBR2] ಮಲಗಲು ಸ್ಥಳವೂ ಸಿಕ್ಕುವುದಿಲ್ಲ. [QBR]
16. ನಾನಾದರೋ ಮುಂಜಾನೆ ನಿನಗೆ ಸ್ತುತಿಗೀತೆಗಳನ್ನು ಹಾಡುವೆ; [QBR2] ನಿನ್ನ ಪ್ರೀತಿಯ ಕುರಿತು ಕೊಂಡಾಡುವೆನು; [QBR] ಯಾಕೆಂದರೆ ಇಕ್ಕಟ್ಟಿನಲ್ಲಿ ನೀನೇ ನನಗೆ ಆಶ್ರಯದುರ್ಗವಾಗಿರುವೆ. [QBR]
17. ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆ. [QBR2] ಯಾಕೆಂದರೆ ನೀನೇ ನನಗೆ ಆಶ್ರಯದುರ್ಗವಾಗಿರುವೆ. [QBR2] ನನ್ನನ್ನು ಪ್ರೀತಿಸುವ ದೇವರು ನೀನೇ! [PE]