2. ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ.
|
5. ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು!
|
6. ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ.
|
7. ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.
|
9. ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು.
|