ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; [QBR2] ರೋಷದಿಂದ ನನ್ನನ್ನು ದಂಡಿಸಬೇಡ. [QBR]
2. ಯೆಹೋವನೇ, ನನ್ನನ್ನು ಕನಿಕರಿಸು! [QBR2] ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, [QBR] ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ. [QBR]
3. ನನ್ನ ಇಡೀ ದೇಹ ನಡುಗುತ್ತಿದೆ. [QBR2] ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು? [QBR]
4. ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! [QBR2] ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು. [QBR]
5. ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? [QBR2] ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? [QBR2] ಆದ್ದರಿಂದ ನನ್ನನ್ನು ಗುಣಪಡಿಸು.
6. ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. [QBR2] ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. [QBR] ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. [QBR2] ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ. [QBR]
7. ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. [QBR2] ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ.
8. ದುಷ್ಟರೇ, ತೊಲಗಿಹೋಗಿರಿ. [QBR2] ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. [QBR]
9. ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. [QBR2] ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು.
10. ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. [QBR2] ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 150
ಕೀರ್ತನೆಗಳು 6:77
1 ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ಯೆಹೋವನೇ, ನನ್ನನ್ನು ಕನಿಕರಿಸು! ನಾನು ರೋಗಿಯಾಗಿದ್ದೇನೆ, ಬಲಹೀನನಾಗಿದ್ದೇನೆ, ನನ್ನನ್ನು ಗುಣಪಡಿಸು! ನನ್ನ ಎಲುಬುಗಳು ನಡುಗುತ್ತಿವೆ. 3 ನನ್ನ ಇಡೀ ದೇಹ ನಡುಗುತ್ತಿದೆ. ಯೆಹೋವನೇ, ನನ್ನನ್ನು ಗುಣಪಡಿಸಲು ಇನ್ನೆಷ್ಟುಕಾಲ ಬೇಕು? 4 ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು. 5 ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು. 6 ಯೆಹೋವನೇ, ರಾತ್ರಿಯೆಲ್ಲಾ ನಿನಗೆ ಪ್ರಾರ್ಥಿಸಿದೆನು. ನನ್ನ ಹಾಸಿಗೆಯು ನನ್ನ ಕಣ್ಣೀರಿನಿಂದ ಒದ್ದೆಯಾಗಿದೆ. ನನ್ನ ಹಾಸಿಗೆಯಿಂದ ಕಣ್ಣೀರು ತೊಟ್ಟಿಕ್ಕುತ್ತಿದೆ. ನಾನು ಅತ್ತು ಗೋಳಾಡಿ ಬಲಹೀನನಾಗಿದ್ದೇನೆ. 7 ನನ್ನ ವೈರಿಗಳು ನನಗೆ ಅನೇಕ ತೊಂದರೆಗಳನ್ನು ಮಾಡಿರುವುದರಿಂದ ನನಗೆ ದುಃಖವೂ ಗೋಳಾಟವೂ ಉಂಟಾಗಿವೆ. ನನ್ನ ಕಣ್ಣುಗಳು ಬಲಹೀನಗೊಂಡಿವೆ; ಅತ್ತತ್ತು ಆಯಾಸಗೊಂಡಿವೆ. 8 ದುಷ್ಟರೇ, ತೊಲಗಿಹೋಗಿರಿ. ಯಾಕೆಂದರೆ ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ. 9 ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು. 10 ನನ್ನ ವೈರಿಗಳೆಲ್ಲ ಗಲಿಬಿಲಿಗೊಂಡು ನಿರಾಶರಾಗುವರು. ಇದ್ದಕ್ಕಿದ್ದಂತೆ ಅವಮಾನಿತರಾಗಿ ಹಿಂತಿರುಗುವರು.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 6 / 150
Common Bible Languages
West Indian Languages
×

Alert

×

kannada Letters Keypad References