3. ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಕ್ರಮಣ ಮಾಡುವಿರಿ? ನಾನು ಬಾಗಿದ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.
|
4. ನ್ನನ್ನು ಉನ್ನತಸ್ಥಾನದಿಂದ ಕೆಳಗಿಳಿಸಬೇಕೆಂದು ಅವರು ಕುತಂತ್ರ ಮಾಡುತ್ತಿದ್ದಾರೆ. ನನ್ನ ಕುರಿತು ಸುಳ್ಳಾಡುವುದು ಅವರಿಗೆ ಸಂತೋಷ. ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುವರು.
|
8. ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.
|
9. ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.
|
10. ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.
|
12. ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.
|