ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು
1. ದೇವರೇ, ನೀನೇ ನನ್ನ ದೇವರು. [QBR2] ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. [QBR] ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; [QBR2] ನನ್ನ ದೇಹವು ನಿನಗಾಗಿ ಬಯಸಿದೆ. [QBR]
2. ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, [QBR2] ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ. [QBR]
3. ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. [QBR2] ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ. [QBR]
4. ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. [QBR2] ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು. [QBR]
5. ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. [QBR2] ನನ್ನ ಬಾಯಿ ನಿನ್ನನ್ನು ಕೊಂಡಾಡುವುದು. [QBR]
6. ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. [QBR2] ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು. [QBR]
7. ನಿಜವಾಗಿಯೂ ನೀನೇ ನನಗೆ ಸಹಾಯಕ. [QBR2] ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು. [QBR]
8. ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. [QBR2] ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.
9. ನನ್ನನ್ನು ಕೊಲ್ಲಬೇಕೆಂದಿರುವವರು [QBR2] ಪಾತಾಳಕ್ಕೆ ಇಳಿದುಹೋಗುವರು. [QBR]
10. ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. [QBR2] ಅವರ ಶವಗಳು ನರಿಗಳ ಪಾಲಾಗುವವು. [QBR]
11. ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. [QBR2] ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, [QBR2] ಯಾಕೆಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ. [PE]

ಟಿಪ್ಪಣಿಗಳು

No Verse Added

ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 63 / 150
ಕೀರ್ತನೆಗಳು 63:38
1 ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ. 2 ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ. 3 ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ. 4 ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು. 5 ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು. 6 ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು. 7 ನಿಜವಾಗಿಯೂ ನೀನೇ ನನಗೆ ಸಹಾಯಕ. ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು. 8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು. 9 ನನ್ನನ್ನು ಕೊಲ್ಲಬೇಕೆಂದಿರುವವರು ಪಾತಾಳಕ್ಕೆ ಇಳಿದುಹೋಗುವರು. 10 ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು. 11 ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ.
ಒಟ್ಟು 150 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 63 / 150
Common Bible Languages
West Indian Languages
×

Alert

×

kannada Letters Keypad References