3. ಅವರು ನನ್ನ ಬಗ್ಗೆ ಕಡುಸುಳ್ಳುಗಳನ್ನು ಹೇಳಿದ್ದಾರೆ. ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ. ಅವರ ಮಾತುಗಳು ವಿಷಬಾಣಗಳಂತಿವೆ.
|
5. ಕೇಡು ಮಾಡಲು ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ ಬಲೆಯೊಡ್ಡಲು ಆಲೋಚಿಸುವರು. “ತಮ್ಮ ಬಲೆಗಳು ಯಾರಿಗೂ ಕಾಣುವುದಿಲ್ಲ” ಎಂದು ಮಾತಾಡಿಕೊಳ್ಳುವರು.
|
6. ಅವರು ತಮ್ಮ ಬಲೆಗಳನ್ನು ಅಡಗಿಸಿಟ್ಟಿದ್ದಾರೆ; ಬೇಟೆಗಳಿಗಾಗಿ ಎದುರುನೋಡುತ್ತಿದ್ದಾರೆ. ಜನರು ಕುತಂತ್ರಿಗಳಾಗಿದ್ದರೆ, ಅವರ ಆಲೋಚನೆಗಳನ್ನು ತಿಳಿದುಕೊಳ್ಳುವುದು ಬಹು ಕಷ್ಟ.
|
8. ದುಷ್ಟರು ಬೇರೆಯವರಿಗೆ ಕೇಡು ಮಾಡಲು ಆಲೋಚಿಸುವರು. ಆದರೆ ಆ ಕೇಡುಗಳು ಅವರಿಗೇ ಸಂಭವಿಸುವಂತೆ ದೇವರು ಮಾಡುವನು. ಆಗ ಅವರನ್ನು ಕಂಡ ಪ್ರತಿಯೊಬ್ಬನೂ ಆಶ್ಚರ್ಯದಿಂದ ತಲೆಯಾಡಿಸುವನು.
|
9. ದೇವರ ಕಾರ್ಯವನ್ನು ಜನರು ಕಂಡು ಅದರ ಬಗ್ಗೆ ಬೇರೆಯವರಿಗೂ ತಿಳಿಸುವರು. ಹೀಗೆ ಪ್ರತಿಯೊಬ್ಬರೂ ದೇವರ ಬಗ್ಗೆ ಹೆಚ್ಚಾಗಿ ಕಲಿತುಕೊಂಡು ಆತನಲ್ಲಿ ಭಯಭಕ್ತಿಯುಳ್ಳವರಾಗುವರು.
|